ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
ರಾಷ್ಟ್ರಪತಿ ಚುನಾವಣೆ ಸಧ್ಯದಲ್ಲೆ ನಡೆಯಲಿರುವ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದು, ಬಿಜೆಪಿ ವಿರುದ್ಧ ಮೈತ್ರಿಕೂಟ ರಚಿಸುವ ಬಗ್ಗೆ ಚರ್ಚಿಸಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ ವೇಳೆ 2019 ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆಯೂ ಮಮತಾ ಬ್ಯಾನರ್ಜಿ ಹಾಗೂ ಸೋನಿಯಾ ಗಾಂಧಿ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ವಿರುದ್ಧ ವಿರೋಧಪಕ್ಷಗಳು ಸಹ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಜೆಡಿಯು ನಾಯಕ ಶರದ್ ಯಾದವ್, ನಿತೀಶ್ ಕುಮಾರ್ ಸೇರಿದಂತೆ ಅನೇಕ ವಿಪಕ್ಷಗಳ ನಾಯಕರು ಅಭಿಪ್ರಾಯಪಟ್ಟಿದ್ದು, ಸೋನಿಯಾ ಗಾಂಧಿ ಇದಕ್ಕಾಗಿ ನೇತೃತ್ವ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರಾವಧಿ ಜುಲೈಗೆ ಮುಕ್ತಾಯಗೊಳ್ಳಲಿದ್ದು, ರಾಷ್ಟ್ರಪತಿ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿಕೊಳ್ಳುತ್ತಿವೆ.