ಸಾಂದರ್ಭಿಕ ಚಿತ್ರ 
ದೇಶ

ಮರಾಠಿ ಚಿತ್ರ ನಿರ್ಮಾಪಕ ಆತ್ಮಹತ್ಯೆ ಪ್ರಕರಣ: ಪತ್ನಿ, ಸಾಕು ಸಹೋದರರ ಬಂಧನ

ಮರಾಠಿ ಚಿತ್ರ ನಿರ್ಮಾಪಕ ಅತುಲ್ ಬಿ ತಪ್ಕಿರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು...

ಪುಣೆ: ಮರಾಠಿ ಚಿತ್ರ ನಿರ್ಮಾಪಕ ಅತುಲ್ ಬಿ ತಪ್ಕಿರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಮಂಗಳವಾರ ನಿರ್ಮಾಪಕನ ಪತ್ನಿ ಹಾಗೂ ಆಕೆಯ ಇಬ್ಬರು ಸಾಕು ಸಹೋದರರನ್ನು ಬಂಧಿಸಿದ್ದಾರೆ.
ತಪ್ಕಿರ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪತ್ನಿ ಪ್ರಿಯಾಂಕ ಅತುಲ್ ತಪ್ಕಿರ್(30) ಹಾಗೂ ಸಾಕು ಸಹೋದರರಾದ ಕಲ್ಯಾಣ್ ಗವ್ಹಾನೆ ಮತ್ತು ಬಾಲು ಗವ್ಹಾನೆಯನ್ನು ಇಂದು ಖೆದ್ ಮತ್ತು ನಗರದ ಕೊಂಡ್ವ ಪ್ರದೇಶದಲ್ಲಿರುವ ಅವರ ನಿವಾಸಗಳಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿರ್ಮಾಪಕ ತಪ್ಕಿರ್ ಅವರ ತಂದೆ ಬಾಜಿರಾವ್ ತಪ್ಕಿರ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಸೆನ್ 306 ಮತ್ತು 34ರಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಡೆಕ್ಕನ್ ಜಿಮಖಾನ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಆರ್ ಎ ಪಾಟೀಲ್ ಅವರು ಹೇಳಿದ್ದಾರೆ.
ಮೇ 14ರಂದು ಚಿತ್ರ ನಿರ್ಮಾಪಕ ತಪ್ಕಿರ್(35) ಅವರು ಸಾಮಾಜಿಕ ತಾಣ ಫೇಸ್ ಬುಕ್ ನಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿ ಬಳಿಕ ಖಾಸಗಿ ಹೋಟೆಲ್ ನ ರೂಮ್ ಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಲ್ಲದೆ ತಮ್ಮ ಸಾವಿಗೆ ಪತ್ನಿ ಹಾಗೂ ಆಕೆಯ ಸಾಕು ಸಹೋದರರು ಕಾರಣ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!