ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ 
ದೇಶ

ದೆಹಲಿ ಪೊಲೀಸರಿಗೆ ಹಿನ್ನಡೆ: ಜೆಎನ್'ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಿಬಿಐಗೆ ಹಸ್ತಾಂತರ

ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಹಸ್ತಾಂತರಿಸಲಾಗಿದೆ...

ನವದೆಹಲಿ: ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಹಸ್ತಾಂತರಿಸಲಾಗಿದೆ. 
ನಜೀಬ್ ಅಹ್ಮದ್ ನಾಪತ್ತೆ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿದೆ ಎಂದು ತಿಳಿದುಬಂದಿದೆ. 
ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಂಬಂಧದ ತನಿಖೆಯಲ್ಲಿ ದೆಹಲಿ ಪೊಲೀಸರು ವಿಳಂಬ ನೀತಿಯನ್ನು ಅನುಸರಿಸುತ್ತಿದ್ದು, ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿಗಳು ಕಂಡಬರದ ಹಿನ್ನಲೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 
ಕಳೆದ 2016 ಅಕ್ಟೋಬರ್ 14ರಂದು ಜೆಎನ್ ಯು ವಿದ್ಯಾರ್ಥಿ ನಜೀಬ್ ಹಾಗೂ ಎಬಿವಿಪಿ ಕಾರ್ಯಕರ್ತರೊಂದಿಗೆ ಜಗಳವಾಗಿತ್ತು, ಆ ಜಗಳ ಬಳಿಕ ನಜೀಬ್ ನಾಪತ್ತೆಯಾಗಿದ್ದ. ಹೀಗಾಗಿ ಆರ್ ಎಸ್ ಎಸ್ ಬೆಂಬಲದ ಎಬಿವಿಪಿ  ಸಂಘಟನೆ ಕಾರ್ಯಕರ್ತರ ಮೇಲೆ ಪೊಲೀಸರು ಅನುಮಾನದ ಆಧಾರದ ಮೇರೆಗೆ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!