ಸುಬ್ರಹ್ಮಣ್ಯನ್ ಸ್ವಾಮಿ 
ದೇಶ

ಚಿದಂಬರಂ ಅವರು ಸೋನಿಯಾ ಗಾಂಧಿಯವರ ಖಾಸಗಿ ಅಕ್ರಮ ಹಣ ವರ್ಗಾವಣೆಗಾರರು: ಸುಬ್ರಹ್ಮಣ್ಯನ್ ಸ್ವಾಮಿ

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ...

ನವದೆಹಲಿ: ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ, ಚಿದಂಬರಂ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಖಾಸಗಿಯಾಗಿ ಅಕ್ರಮ ಹಣ ವರ್ಗಾವಣೆ ಮಾಡುವವರು ಎಂದು ಟೀಕಿಸಿದ್ದಾರೆ.
ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ ಅವರು, ವಿದೇಶಿ ಹೂಡಿಕೆ ಪ್ರಚಾರ ಮಂಡಳಿ  ಅನುಮೋದನೆಯನ್ನು ಚಿದಂಬರಂ ತಮ್ಮ ಮಗನ ಲಾಭಕ್ಕಾಗಿ ನೀಡಿದರು ಎಂದರು.
ಚಿದಂಬರಂ ಅತ್ಯಂತ ಭ್ರಷ್ಟ ವ್ಯಕ್ತಿ. ಅವರು ಸೋನಿಯಾ ಗಾಂಧಿಗೆ ಕೂಡ ಅಕ್ರಮವಾಗಿ ಹಣ ಸಾಗಿಸುವವರು. ಅವರು ಸಚಿವರಾಗಿದ್ದಾಗ ಎಲ್ಲಾ ಕಾನೂನುಗಳನ್ನು ಮುರಿದಿದ್ದರು. ತಮ್ಮ ಮಗನಿಗೆ ಲಂಚ ಪಡೆಯಲು ಅನುಕೂಲವಾಗಲೆಂದು ಎಫ್ಐಪಿಬಿ ಅನುಮೋದನೆ ಪಡೆದರು.
ಇಂತವರಿಗೆ ಶಿಕ್ಷೆಯಾಗಬೇಕು,  ಏಕೆಂದರೆ ಭವಿಷ್ಯದಲ್ಲಿ ಸಚಿವರುಗಳು ಇಂತಹ ನೀಚ ಕೆಲಸ ಮಾಡಲು ಹಿಂಜರಿಯುತ್ತಾರೆ ಎಂದು ಹೇಳಿದರು.
ಹಣಕಾಸು ಇಲಾಖೆಯ ಕೆಲವು ಅಧಿಕಾರಿಗಳು ಚಿದಂಬರಂ ಪರವಾಗಿ ಇದ್ದಾರೆ ಎಂದು ಕೂಡ ಸುಬ್ರಹ್ಮಣ್ಯನ್ ಸ್ವಾಮಿ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel