ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಉಗ್ರರು ಅಡಗಿರುವ ಶಂಕೆ, ಕಾರ್ಯಾಚರಣೆಗಳಿದ ಸೇನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ, ಭಾರತೀ ಸೇನೆ ಹಾಗೂ ವಿಶೇಷ ಕಾರ್ಯಾಚರಣೆ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ, ಭಾರತೀ ಸೇನೆ ಹಾಗೂ ವಿಶೇಷ ಕಾರ್ಯಾಚರಣೆ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಬುಧವಾರ ತಿಳಿದುಬಂದಿದೆ. 
ಶೋಪಿಯಾನ್ ಜಿಲ್ಲೆಯ ಹೆಫ್ ಮತ್ತು ಶಿರ್ಮಾಲ್ ಎಂಬ ಎರಡು ಗ್ರಾಮಗಳಲ್ಲಿ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದು, ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದೆ ಎಂದು ವರದಿಗಲು ತಿಳಿಸಿವೆ. 
ಎರಡು ಗ್ರಾಮಗಳಲ್ಲಿ 1,000ಕ್ಕೂ ಹೆಚ್ಚು ಪೊಲೀಸರು ಹಾಗೂ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
ಒಂದೆಡೆ ಉಗ್ರರ ಸದೆಬಡಿಯಲು ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದರೆ, ಮತ್ತೊಂದೆಡೆ ಬಾಲಾಕೋಟ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಹಾಗೂ ಭಾರತೀಯ ಸೇನೆ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಮೂಲಗಳು ತಿಳಿಸಿವೆ.
ಪಾಕಿಸ್ತಾನ ಸೇನೆ ಬಾಲಾಕೋಟ್ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಹಿನ್ನಲೆಯಲ್ಲಿ ಗಡಿಯಲ್ಲಿರುವ 1,700 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ