ಸಾಂದರ್ಭಿಕ ಚಿತ್ರ 
ದೇಶ

ಸಾಮಾಜಿಕ ಮಾಧ್ಯಮದಲ್ಲಿ ಅತ್ಯಾಚಾರ ಸಂತ್ರಸ್ಥೆಯ ಫೋಟೋ ಹಾಕಿದ ವ್ಯಕ್ತಿಯ ಬಂಧನ

ಸಾಮಾಜಿಕ ಮಾಧ್ಯಮದಲ್ಲಿ ಅತ್ಯಾಚಾರ ಸಂತ್ರಸ್ಥೆಯ ಆಕ್ಷೇಪಾರ್ಹ ಫೋಟೋ ಪೋಸ್ಟ್ ಮಾಡಿದ 25 ವರ್ಷದ...

ಮುಜಾಫರ್ ನಗರ: ಸಾಮಾಜಿಕ ಮಾಧ್ಯಮದಲ್ಲಿ ಅತ್ಯಾಚಾರ ಸಂತ್ರಸ್ಥೆಯ ಆಕ್ಷೇಪಾರ್ಹ ಫೋಟೋ ಪೋಸ್ಟ್ ಮಾಡಿದ 25 ವರ್ಷದ ಯುವಕನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಚರ್ತವಾನ್ ಪಟ್ಟಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಾಬು ಎಂಬ ಯುವಕನನ್ನು ನಿನ್ನೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಠಾಣಾ ಅಧಿಕಾರಿ ಸಂಜೀವ್ ಶರ್ಮಾ ಅವರು ತಿಳಿಸಿದ್ದಾರೆ.
ಮಹಿಳೆಯೊಬ್ಬರು ಇತ್ತೀಚಿಗೆ ಬಾಬು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾದ ನಂತರ ಕೇಸ್ ಹಿಂಪಡೆಯುವಂತೆ ಬಾಬು ಯುವತಿ ಮೇಲೆ ಒತ್ತಡ ಹಾಕಿದ್ದ. ಆದರೆ ಯುವತಿ ಕೇಸ್ ಹಿಂಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಾಬು ಆಕೆಯ ಆಕ್ಷೇಪಾರ್ಹ ಫೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾನೆ ಎಂದು ಶರ್ಮಾ ತಿಳಿಸಿದ್ದಾರೆ. ಅಲ್ಲದೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!