ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಪಾಟ್ನಾ: ಬಿಹಾರದ ಬಿಜೆಪಿ ಕಚೇರಿ ಮೇಲೆ ಆರ್ ಜೆಡಿ ಕಾರ್ಯಕರತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಪಕ್ಷ ನಾಯಕ ಪ್ರೇಮ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ನೂರಾರು ಕಾರ್ಯಕರ್ತರು ಲಾಲು ಪ್ರಸಾದ್ ಯಾದವ್ ಹಾಗೂ ನಿತೀಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ಡಾಕ್ ಬಂಗ್ಲೋ ಸ್ಕ್ವೇರ್ ಬಳಿ ನಿತೀಶ್ ಕುಮಾರ್ ಹಾಗೂ ಲಾಲು ಪ್ರಸಾದ್ ಯಾದವ್ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಆರ್ ಜೆಡಿ ಕಾರ್ಯಕರ್ತರು ಬಿಜೆಪಿ ಪಕ್ಷದ ಕಚೇರಿ ಹಾಗೂ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತಿಭಟನಾ ನಿರತ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಪ್ರಕರಣದ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡಲಿದ್ದೇವೆ ಎಂದು ಬಿಜೆಪಿ ನಾಯಕರು ಹೇಳಿದ್ದು, ಪ್ರತಿಭಟನೆಯಲ್ಲಿ ಬಿಜೆಪಿ ಮಿತ್ರ ಪಕ್ಷಗಳಾದ ಲೋಕ್ ಜನಶಕ್ತಿ ಪಕ್ಷ, ಹೆಚ್ಎಎಂ, ಆರ್ ಎಲ್ಎಸ್ ಪಿ ಪಕ್ಷದ ಕಾರ್ಯಕರ್ತರೂ ಸಹ ಭಾಗಿಯಾಗಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics