ಸಂಗ್ರಹ ಚಿತ್ರ 
ದೇಶ

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಮುಖಂಡನ ಗುಂಡಿಟ್ಟು ಹತ್ಯೆ!

ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ನಾಯಕರೊಬ್ಬರನ್ನು ಅವರ ಮನೆಗೇ ನುಗ್ಗಿ ಗುಂಡಿಟ್ಟು ಕೊಲೆಗೈದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಲಖನೌ: ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ನಾಯಕರೊಬ್ಬರನ್ನು ಅವರ ಮನೆಗೇ ನುಗ್ಗಿ ಗುಂಡಿಟ್ಟು ಕೊಲೆಗೈದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಅಮ್ರೋಹಾ ಜಿಲ್ಲೆಯ ಟಿಗಾರಿಯಾ ಭುಡ್‌  ನಲ್ಲಿರುವ ಬಿಎಸ್ ಪಿ ಮುಖಂಡ ಕೈಲಾಶ್ ಚಂದ್ರ ಥೆಕೆದಾರ್‌ ಅವರ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಮೂಲಗಳ ಪ್ರಕಾರ  ಕೈಲಾಶ್ ಅವರು ಕುಟುಂಬದಿಂದ ಬೇರ್ಪಟ್ಟು ಏಕಾಂಗಿಯಾಗಿ ಜೀವಿಸುತ್ತಿದ್ದು, ಅವರ ಮನೆಕೆಲಸದಾಳು ಅವರ ರೂಮಿಗೆ ಬಂದು ನೋಡಿದಾಗ ಅವರು ಗುಂಡೇಟಿನಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ತಿಳಿದುಬಂದಿದೆ.

ಪ್ರಸ್ತುತ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕೈಲಾಶ್ ಅವರು ನಿದ್ರಿಸುತ್ತಿದ್ದಾಗ ಅವರ ಮೇಲೆ ದಾಳಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಬಿಎಸ್ ಪಿ ಪಕ್ಷ  ಸೇರಿದ್ದ ಕೈಲಾಶ್ , ಈ ಹಿಂದೆ ಸಮಾಜವಾದಿ ಪಕ್ಷದ ಪರವಾಗಿ ನಗರ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.  ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ