ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದಿದ್ದ ಮಗು ಜೀವಂತ ರಕ್ಷಣೆ- ಸ್ಥಿತಿ ಗಂಭೀರ
ಸೆಹೋರ್: 500 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದು ರಕ್ಷಣೆಗೊಂಡಿದ್ದ 5 ವರ್ಷದ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಾವನ್ನಪ್ಪಿದೆ.
ಮಧ್ಯಪ್ರದೇಶದ ಸೆಹೋರ್ ಜಿಲ್ಲೆ ನಿನ್ನೆಯಷ್ಟೇ 500 ಅಡಿ ಆಳವಿರುವ ಕೊಳವೆ ಬಾವಿಗೆ 5 ವರ್ಷದ ಬಾಲಕನೊಬ್ಬ ಬಿದ್ದಿದ್ದ.
5 ವರ್ಷದ ಸತ್ಯಂ ಎಂಬ ಬಾಲಕ ನಿನ್ನೆಯಷ್ಟೇ ಕೊಳವೆ ಬಾವಿಗೆ ಬಿದ್ದಿದ್ದ. ಸುದೀರ್ಘ ರಕ್ಷಣಾ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು ಕೊನೆಗೂ ಬಾಲಕನನ್ನು ಜೀವಂತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದರು.
ರಕ್ಷಣೆ ಮಾಡಿದ ಬಳಿಕ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕನಿಗೆ ಚಿಕಿತ್ಸೆ ನೀಡಿದ ವೈದ್ಯರು ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.
ಕಳೆದ ಫೆಬ್ರವರಿ ತಿಂಗಳಿನಲ್ಲಿಯೂ 1 ವರ್ಷದ ಮಗುವೊಂದು ಮಧ್ಯಪ್ರದೇಶದ ಬೆಹ್ರಿ ಖುದ್ ಗ್ರಾಮದಲ್ಲಿರುವ 50 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದಿತ್ತು. 17 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಣೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics