ಉತ್ತರಪ್ರದೇಶ: ಬಸ್'ಗೆ ಬೆಂಕಿ ತಗುಲಿ 4 ಸಾವು, 15 ಜನರಿಗೆ ಗಾಯ 
ದೇಶ

ಉತ್ತರಪ್ರದೇಶ: ಬಸ್'ಗೆ ಬೆಂಕಿ ತಗುಲಿ 4 ಸಾವು, 15 ಜನರಿಗೆ ಗಾಯ

ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಬಸ್ ಮೇಲೆ ಹೈ-ಟೆನ್ಶನ್ ವೈಯರ್ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಉತ್ತರಪ್ರದೇಶದ ಬಂದಾ ಜಿಲ್ಲೆಯಲ್ಲಿ...

ಬಂದಾ: ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಬಸ್ ಮೇಲೆ ಹೈ-ಟೆನ್ಶನ್ ವೈಯರ್ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಉತ್ತರಪ್ರದೇಶದ ಬಂದಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 
ಬೆಳಿಗ್ಗೆ 9.30 ರ ಸುಮಾರಿಗೆ ಘಟಡನೆ ನಡೆದಿದೆ. ಜಸ್ಪುರ್ ಬಳಿ ಬಸ್ ಸಂಚಿರಿಸುತ್ತಿತ್ತು. ಈ ವೇಳೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಗುದ್ದಿದೆ. ಪರಿಣಾಮ ವಿದ್ಯುತ್ ಕಂಬದ ಹೈ-ಟೆನ್ಶನ್ ವೈಯರ್ ಬಸ್ ಮೇಲೆ ಬಿದ್ದು, ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. 
ಪರಿಣಾಮ ಸ್ಥಳದಲ್ಲಿಯ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್ ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ