ಲಖನೌ: ದೇಶದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್) ಇಲ್ಲದಿದ್ದರೆ ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಹಾಗೂ ಪಶ್ಚಿಮ ಬಂಗಾಳ ಪಾಕಿಸ್ತಾನದ ಪಾಲಾಗುತ್ತಿದ್ದವು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಹೇಳಿದ್ದಾರೆ.
ಇಂದು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಆರ್ ಎಸ್ ಎಸ್ ವಿರುದ್ಧ ಪಕ್ಷಗಳ ಟೀಕೆಗಳಿಗೆ ಉತ್ತರಿಸಿದ ಯೋಗಿ ಆದಿತ್ಯನಾಥ್, ರಾಜಕೀಯದೊಂದಿಗೆ ಯಾವುದೇ ಸಂಬಂಧ ಹೊಂದಿರದ ಆರ ಎಸ್ಎಸ್ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ. ಆರ್ ಎಸ್ಎಸ್ ಯಾವತ್ತೂ ಸರ್ಕಾರದಿಂದ ಸಹಾಯವನ್ನು ಪಡೆದಿಲ್ಲ. ಕೆಲವರು ರಾಷ್ಟ್ರಗೀತೆಯನ್ನು ಕೋಮುವಾದದೊಂದಿಗೆ ತಳುಕು ಹಾಕುತ್ತಾರೆ. ಒಂದು ವೇಳೆ ಆರ್ ಸ್ಎಸ್ ಮತ್ತು ಡಾ. ಶ್ಯಾಮ ಪ್ರಸಾದ್ ಮುಖರ್ಜಿ (ಜನ ಸಂಘದ ಸಂಸ್ಥಾಪಕರು) ಇಲ್ಲದೇ ಇರುತ್ತಿದ್ದರೆ, ಶಾಲೆಯಲ್ಲಿ ವಂದೇ ಮಾತರಂ ಹಾಡುವುದನ್ನು ಜನರು ಮರೆತು ಬಿಡುತ್ತಿದ್ದರು. ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಕಾಶ್ಮೀರ ಪಾಕಿಸ್ತಾನದ ಪಾಲಾಗುತ್ತಿತ್ತು. ಆರ್ ಸ್ಎಸ್ ಸಂಘಟನೆ 64,000ಕ್ಕಿಂತಲೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.
ಯೋಗಿ ಸರ್ಕಾರ ಕೇವಲ ಗೋ ಸಂರಕ್ಷಣೆ, ಗೋ ಮಾಂಸ ನಿಷೇಧವೊಂದಕ್ಕೇ ಮಾತ್ರ ಸೀಮಿತವಾಗಿದೆ ಎಂದು ಪ್ರತಿಪಕ್ಷಗಳು ಹುಯಿಲೆಬ್ಬಿಸಿದವು. ಆಗ, ಆರೆಸ್ಸೆಸ್ ವಿಚಾರ ಪ್ರಸ್ತಾವನೆಯಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಗೋವುಗಳ ಬಗ್ಗೆ, ಗಂಗಾನದಿ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ಗಾಯ್, ಗಂಗಾ, ಗೋ ರಕ್ಷಾ (ಹಸು,ಗಂಗಾ ನದಿ ಮತ್ತು ಗೋರಕ್ಷಣೆ ) ಈ ಮೂರು ವಿಷಯಗಳ ಬಗ್ಗೆ ಮಾತ್ರ ಸರ್ಕಾರ ಗಮನ ಹರಿಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು, ಸ್ವಾತಂತ್ರ್ಯ ಹೋರಾಟದಲ್ಲಿ ಆರ್‍ಆರ್‍ಎಸ್ಎಸ್ ಭಾಗವಹಿಸಿರಲಿಲ್ಲ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics