ಚಂಢೀಗಡ: ಪಂಜಾಬ್ ನಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು 15 ಮಂದಿ ಗಾಯಗೊಂಡಿದ್ದಾರೆ.
ಅಮೃತಸರದಿಂದ 40 ಕಿ.ಮೀ ದೂರದಲ್ಲಿರುವ ಬೀಸ್ ಟೌನ್ ನಲ್ಲಿ ಅತೀ ವೇಗದಿಂದ ತೆರಳುತ್ತಿದ್ದ ಸ್ಫೋರ್ಟ್ಸ್ ಕಾರು ನಿಯಂತ್ರಣ ತಪ್ಪಿ ಅದರಲ್ಲಿದ್ದ ಏಳು ಮಂದಿ ಸಾವನ್ನಪ್ಪಿದ್ದಾರೆ.
ಇನ್ನು ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು ಪರಿಣಾಮ ನಾಲ್ವರು ಸಾವನ್ನಪ್ಪಿದ್ದು 15 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.