ಅಗಲಿದ ನಾಯಕನಿಗೆ ಗೌರವ ನಮನ 
ದೇಶ

ರಾಜೀವ್ ಗಾಂಧಿಯವರ 26ನೇ ಪುಣ್ಯ ತಿಥಿ: ಕಾಂಗ್ರೆಸ್ ನಾಯಕರಿಂದ ಗೌರವ ನಮನ

ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯವರ 26ನೇ ಪುಣ್ಯ ತಿಥಿ ಇಂದು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ನವದೆಹಲಿ:ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯವರ 26ನೇ ಪುಣ್ಯ ತಿಥಿ ಇಂದು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ,  ಅವರ ಪುತ್ರ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ ಮತ್ತು ರಾಬರ್ಟ್ ವಾದ್ರಾ ರಾಹುಲ್ ಗಾಂಧಿಯವರ ಸ್ಮಾರಕವಿರುವ ವೀರ್ ಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.
ಪ್ರೀತಿಯಿಂದ ಪ್ರೇರೇಪಿಸಲ್ಪಟ್ಟ ನಾಯಕ, ಸಹಾನುಭೂತಿ ಮತ್ತು ಉದಾರತೆ ಹೊಂದಿದ್ದ  ಜನ ನಾಯಕರಾಗಿದ್ದ ತಂದೆಯವರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತಾರೆ. ನಾವು ಅವರನ್ನು ಕಳೆದುಕೊಳ್ಳುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್  ಕೂಡ ಅಗಲಿದ ಹಿರಿಯ ನಾಯಕನಿಗೆ ಗೌರವ ನಮನ ಸಲ್ಲಿಸಿದರು.
ಭಾರತ ದೇಶದ 6ನೇ ಪ್ರಧಾನಿಯಾದ ರಾಜೀವ್ ಗಾಂಧಿಯವರನ್ನು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ 1991, ಮೇ 21ರಂದು ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಹತ್ಯೆ ಮಾಡಲಾಗಿತ್ತು. ಕೇಸಿಗೆ ಸಂಬಂಧಪಟ್ಟಂತೆ ಮುರುಗನ್, ಸಂತನ್, ಪೆರರಿವಲನ್, ನಳಿನಿ, ರಾಬರ್ಟ್ ಪಯಸ್, ಜಯಕುಮಾರ್ ಮತ್ತು ರವಿಚಂದ್ರನ್ ಅವರು ಅಪರಾಧಿಗಳೆಂದು   ಸಾಬೀತಾಯಿತು.
ತಮ್ಮ ತಾಯಿ ಪ್ರಧಾನಿ ಇಂದಿರಾ ಗಾಂಧಿ, 1984 ಅಕ್ಟೋಬರ್ ನಲ್ಲಿ ಹತ್ಯೆಯಾದ ನಂತರ ರಾಜೀವ್ ಗಾಂಧಿ ಅಧಿಕಾರಕ್ಕೆ ಬಂದರು.
ರಾಜೀವ್ ಗಾಂಧಿಯವರ ಪುಣ್ಯ ತಿಥಿಯ ಅಂಗವಾಗಿ ಕಾಂಗ್ರೆಸ್ ಇಂದು ದೇಶಾದ್ಯಂತ ಸಹಿ ಅಭಿಯಾನವನ್ನು ಹಮ್ಮಿಕೊಂಡಿದ್ದು ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡಬೇಕೆಂದು ಜನರಿಂದ ಸಹಿ ಹಾಕಿಸಿಕೊಳ್ಳಲಿದೆ. ಮಹಿಳಾ ಕಾಂಗ್ರೆಸ್ ಈ ನಿಟ್ಟಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದೆ.
ರಾಜೀವ್ ಗಾಂಧಿಯವರ ಜನ್ಮ ದಿನ ಆಗಸ್ಟ್ 20ಕ್ಕೆ ಸಹಿ ಅಭಿಯಾನ ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ