ಡೊನಾಲ್ಡ್ ಟ್ರಂಪ್ 
ದೇಶ

ಭಯೋತ್ಪಾದನೆ ವಿರುದ್ಧ ಹೋರಾಡಲು ಮುಸ್ಲಿಮ್ ಸಮುದಾಯಕ್ಕೆ ಟ್ರಂಪ್ ಕರೆ

ಸೌದಿ ಅರೇಬಿಯಾಗೆ 2 ದಿನಗಳ ಪ್ರವಾಸ ಕೈಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಸ್ಲಿಮ್ ಸಮುದಾಯಕ್ಕೆ ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ಕರೆ ನೀಡಲಿದ್ದಾರೆ.

ರಿಯಾದ್: ಸೌದಿ ಅರೇಬಿಯಾಗೆ 2 ದಿನಗಳ ಪ್ರವಾಸ ಕೈಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಸ್ಲಿಮ್ ಸಮುದಾಯಕ್ಕೆ ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ಕರೆ ನೀಡಲಿದ್ದಾರೆ. 
50 ಮುಸ್ಲಿಮ್ ಬಹುಸಂಖ್ಯಾತ ರಾಷ್ಟ್ರಗಳ ನಾಯಕರನ್ನು ಉದ್ದೇಶಿಸಿ ಮಾತನಾಡಲಿರುವ ಡೊನಾಲ್ಡ್ ಟ್ರಂಪ್, ಇಸ್ಲಾಮ್ ಭಯೋತ್ಪಾದನೆ ನಿರ್ಮೂಲನೆಗೆ ಇಸ್ಲಾಮ್ ನ ತವರು ರಾಷ್ಟ್ರದಲ್ಲಿಯೇ ನಿಂತು ಕರೆ ನೀಡಲಿದ್ದಾರೆ ಎಂದು ಟ್ರಂಪ್ ಅವರ ಭಾಷಣದ ಕರಡು ಪ್ರತಿಯ ಬಗ್ಗೆ ಪ್ರಕಟವಾದ ಅಸೋಸಿಯೇಟೆಡ್ ಪ್ರೆಸ್ ನ ವರದಿಯ ಮೂಲಕ ತಿಳಿದುಬಂದಿದೆ. 
ಡೊನಾಲ್ಡ್ ಟ್ರಂಪ್ ಮುಸ್ಲಿಂ ವಿರೋಧಿ ನೀತಿ ಹಾಗೂ ಹೇಳಿಕೆಗಳಿಂದಲೇ ಸುದ್ದಿಯಾಗಿದ್ದರು. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ನಿರಂತರವಾಗಿ ಇಸ್ಲಾಮಿಕ್ ಭಯೋತ್ಪಾದನೆ ಬಗ್ಗೆ ಕಠಿಣ ನಿಲುವು ತೆಗೆದುಕೊಳ್ಳಬೇಕೆಂದು ಹೇಳುತ್ತಿದ್ದರು. ಅಷ್ಟೇ ಅಲ್ಲದೇ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮ್ ರಾಷ್ಟ್ರಗಳ ಪ್ರಜೆಗಳು ಅಮೆರಿಕಾಗೆ ವಲಸೆ ಬಾರದಂತೆ ಆದೇಶ ಹೊರಡಿಸಿದ್ದರು. 
ಆದರೆ ಈಗ ಡೊನಾಲ್ಡ್ ಟ್ರಂಪ್ ಸೌದಿ ಅರೇಬಿಯಾಗೆ ಭೇಟಿ ನೀಡಿದ್ದು, ಇಸ್ಲಾಮಿಕ್ ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ಮುಸ್ಲಿಮ್ ಸಮುದಾಯಕ್ಕೆ ಕರೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್