ನವದೆಹಲಿ: ಬಾಲಿವುಡ್ ಹಿರಿಯ ನಟ ಹಾಗೂ ಬಿಜೆಪಿ ಸಂಸದ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕಿಡಿ ಹೊತ್ತಿಸಿದ್ದಾರೆ.
ಸೇನಾ ಜೀಪ್ ಗಳಿಗೆ ಕಾಶ್ಮೀರದ ಕಲ್ಲು ತೂರಾಟಗಾರರನ್ನು ಕಟ್ಟುವ ಬದಲು ಅರುಂಧತಿ ರಾಯ್ ಅವರನ್ನು ಕಟ್ಟಿಹಾಕಿ ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಸಂಸದ ಪರೇಶ್ ರಾವಲ್ ಅವರ ಈ ಟ್ವೀಟ್ ಗೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ.
ಅರುಂಧತಿ ರಾಯ್ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಪಿಡಿಪಿ-ಬಿಜೆಪಿ ಮೈತ್ರಿಗೆ ಕಾರಣರಾದವರನ್ನು ಏಕೆ ಜೀಪಿಗೆ ಕಟ್ಟಬಾರದು ಎಂದು ಪ್ರಶ್ನಿಸಿದ್ದಾರೆ.
ಇತ್ತೀಚೆಗಷ್ಟೆ ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸಿದ್ದ ವ್ಯಕ್ತಿಯನ್ನು ಸೇನಾ ಜೀಪ್ ಗೆ ಕಟ್ಟಿ ಹಾಕಿ ಮೆರವಣಿಗೆ ಮಾಡಲಾಗಿತ್ತು.