ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪರ ವಕೀಲ ರಾಮ್ ಜೇಠ್ಮಲಾನಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ವಂಚಕ ಎಂದು ಹೇಳಿರುವ ಬೆನ್ನಲ್ಲೇ ಅರುಣ್ ಜೇಟ್ಲಿ ಕೇಜ್ರಿವಾಲ್ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಿಸಿ 10 ಕೋಟಿ ರೂಪಾಯಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ಇಂಡಿಯಾ ಟುಡೆ ವರದಿ ಪ್ರಕಾರ ಅರುಣ್ ಜೇಟ್ಲಿ ಪರ ವಕೀಲ ಮಾಣಿಕ್ ದೋಗ್ರ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಿದ್ದು 10 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಪರ ವಕೀಲರಾದ ರಾಮ್ ಜೇಠ್ಮಲಾನಿ ತಮ್ಮ ಕಕ್ಷೀದಾರರನ್ನು ಕೋರ್ಟ್ ಎದುರು "ವಂಚಕ" ಎಂದು ಕರೆದಿದ್ದಾರೆ ಆದ್ದರಿಂದ ಅರವಿಂದ್ ಕೇಜ್ರಿವಾಲ್ ಅರುಣ್ ಜೇಟ್ಲಿ ಅವರಿಗೆ 10 ಕೋಟಿ ರೂಪಾಯಿ ಮಾನನಷ್ಟ ಪರಿಹಾರ ನೀಡಬೇಕು ಎಂದು ಮಾಣಿಕ್ ದೋಗ್ರ ಹೇಳಿದ್ದಾರೆ.
ಈಗಾಗಲೇ ಅರುಣ್ ಜೇಟ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಿದ್ದು ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಕಳೆದ ವಾರ ಈ ಪ್ರಕರಣದ ವಿಚಾರಣೆ ನಡೆದಾಗ ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ಅರುಣ್ ಜೇಟ್ಲಿ ಅವರನ್ನು ವಂಚಕ ಎಂದು ಕರೆದಿದ್ದರು.