ಸಹರಾನ್ ಪುರ್: ಡಿಜೆಗಳು ನುಡಿಸಿದ ಸಂಗೀತಕ್ಕೆ ಸಂಬಂಧಪಟ್ಟಂತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಮೂವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ನಡೆದಿದೆ.
ಕಳೆದ ರಾತ್ರಿ ದೀಪಕ್ ಎಂಬುವವರ ಮದುವೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಸಂಗೀತ ನುಡಿಸುವುದಕ್ಕೆ ಸಂಬಂಧಪಟ್ಟಂತೆ ವಾಗ್ವಾದ ಆರಂಭವಾಯಿತು. ನೋಡು ನೋಡುತ್ತಿದ್ದಂತೆ ಜಗಳ ತಾರಕಕ್ಕೇರಿತು. ಎರಡೂ ಕಡೆಯವರು ಮಚ್ಚು, ಲಾಂಗ್ ಗಳನ್ನು ಹಿಡಿದು ಜಗಳ ಮಾಡಲಾರಂಭಿಸಿದರು.
ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಶಾರಾನ್ ಪುರ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಪ್ರಬಲ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು ಇತರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.