ಗಡಿ ನಿಯಂತ್ರಣ ರೇಖೆಯಲ್ಲಿ ಸೇನಾ ಕಾರ್ಯಾಚರಣೆಗೆ ಸರ್ಕಾರದ ಬೆಂಬಲವಿದೆ: ಜೇಟ್ಲಿ
ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಎಲ್ಒಸಿಯಲ್ಲಿ ಭಾರತೀಯ ಸೇನೆ ನಡೆಸುವ ಎಲ್ಲಾ ಕಾರ್ಯಾಚರಣೆಗಳಿಗೂ ಸರ್ಕಾರದ ಬೆಂಬಲವಿದೆ ಎಂದು ಹೇಳಿದ್ದಾರೆ.
ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನ ಪ್ರೇರೇಪಿತ ಭಯೋತ್ಪಾದನಾ ಕೃತ್ಯಗಳಿಗೆ ಪ್ರತೀಕಾರವಾಗಿ ಗಡಿನಿಯಂತ್ರಣ ರೇಖೆಯಲ್ಲಿ ದಾಳಿ ನಡೆಸಿ ನೌಶೇರಾ ಸೆಕ್ಟರ್ ನ ಹಲವು ಸೇನಾ ನೆಲೆಗಳಿಗೆ ಹಾನಿಯುಂಟುಮಾಡಿರಿವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಎಲ್ಒಸಿಯಲ್ಲಿ ಭಾರತೀಯ ಸೇನೆ ನಡೆಸುವ ಎಲ್ಲಾ ಕಾರ್ಯಾಚರಣೆಗಳಿಗೂ ಸರ್ಕಾರದ ಬೆಂಬಲವಿದೆ ಎಂದು ಹೇಳಿದ್ದಾರೆ.
ಪಾಕ್ ನ ಸೇನಾ ನೆಲೆಗಳನ್ನು ಧ್ವಂಸಗೊಳಿಸಿರುವ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ರಕ್ಷಣಾ ಸಚಿವ ಅರುಣ್ ಜೇಟ್ಲಿ, ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಭಾರತೀಯ ಸೇನೆ ನಡೆಸುವ ಕಾರ್ಯಾಚರಣೆಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಭಾರತೀಯ ಸೇನೆ ಕಣಿವೆಯಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ.
ಭಾರತೀಯ ಸೇನೆ ನಡೆಸಿರುವ ದಾಳಿಯಲ್ಲಿ ಪಾಕಿಸ್ತಾನದ ಸೇನಾ ನೆಲೆಗಳಿಗೆ ಹಾನಿಯುಂಟಾಗಿರುವುದನ್ನು ಪಾಕಿಸ್ತಾನದ ಸೇನಾ ವಕ್ತಾರರು ನಿರಾಕರಿಸಿದ್ದಾರೆ.