ಸಾಂದರ್ಭಿಕ ಚಿತ್ರ 
ದೇಶ

ಶೀನಾ ಬೋರಾ ಪ್ರಕರಣದ ತನಿಖಾಧಿಕಾರಿ ಪತ್ನಿ ಅನುಮಾನಾಸ್ಪದ ಸಾವು

ಇಡೀ ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ...

ಮುಂಬೈ: ಇಡೀ ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. 
ಮುಂಬೈ ಪೊಲೀಸ್ ಇನ್ಸ್ ಪೆಕ್ಟರ್ ದ್ಯಾನೇಶ್ವರ್ ಗನೋರೆ ಅವರ ಪತ್ನಿ ದೀಪಾಲಿ ಗನೋರೆ ಹತ್ಯೆಯಾದ ದುರ್ದೈವಿಯಾಗಿದ್ದಾರೆ. 
ಕರ್ತವ್ಯ ನಿರ್ವಹಿಸಿ ಇಂದು ಬೆಳಗಿನ ಜಾವ 3.30ರ ಸುಮಾರಿದೆ ದ್ಯಾನೇಶ್ವರ್ ಅವರು ಮನೆಗೆ ಬಂದಿದ್ದಾರೆ. ಈ ವೇಳೆ ಪತ್ನಿ ಹತ್ಯೆಯಾಗಿರುವುದು ತಿಳಿದುಬಂದಿದೆ. 
ದ್ಯಾನೇಶ್ವರ್ ಅವರು ಬೆಳಿಗಿನ ಜಾವ ಮನೆಗೆ ಬಂದ ವೇಳೆ ಬಾಗಿಲು ತಟ್ಟಿದ್ದಾರೆ. ಎಷ್ಟು ಸಮಯ ಕಳೆದರೂ ಬಾಗಿಲು ತೆಗೆಯದ ಕಾರಣ ಪತ್ನಿಯ ಮೊಬೈಲ್'ಗೆ ಕರೆ ಮಾಡಿದ್ದಾರೆ. ಈ ವೇಳೆ ಪತ್ನಿ ಕರೆಯನ್ನು ಸ್ವೀಕರಿಸಿಲ್ಲ. ಸಾಕಷ್ಟು ಪ್ರಯತ್ನ ಮಾಡಿದ ಬಳಿಕ ದ್ಯಾನೇಶ್ ಬಾಗಿಲನ್ನು ತೆಗೆದಿದ್ದಾರೆ. 
ಮನೆಯೊಳಗೆ ಹೋಗುತ್ತಿದ್ದಂತೆಯೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಮೃತದೇಹವನ್ನು ಕಂಡು ಆಘಾತಗೊಂಡಿದ್ದಾರೆ. ನಂತರ ಹಿರಿಯ ಅಧಿಕಾರಿಗಳಿಗೆ ಹತ್ಯೆ ಬಗ್ಗೆ ಮಾಹಿತಿ ನೀಡಿದ್ದಾರೆ. 
ಘಟನೆ ಬಳಿಗ ದ್ಯಾನೇಶ್ ಅವರ ಪುತ್ರ ನಾಪತ್ತೆಯಾಗಿದ್ದು, ಆತ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮುಂಬೈ ಪೊಲೀಸ್ ವಕ್ತಾರ ಹೇಳಿದ್ದಾರೆ. 
ಘಟನಾ ಸ್ಥಳದಲ್ಲಿ ಹತ್ಯೆಗೆ ಬಳಸಲಾಗಿದ್ದ ಚಾಕು ದೊರಕಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!