ಪಿಒಎಸ್ 
ದೇಶ

ಪಡಿತರ ಅಂಗಡಿಗಳಲ್ಲಿ ಪಿಒಎಸ್ ಅಳವಡಿಕೆ ಆದೇಶಕ್ಕೆ ಕೋರ್ಟ್ ನಿಂದ ತಡೆ

ಎಲ್ಲಾ ಪಡಿತರ ಅಂಗಡಿಗಳಲ್ಲಿ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಸಾಧನಗಳನ್ನು ಅಳವಡಿಸಬೇಕೆಂಬ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರು: ಎಲ್ಲಾ ಪಡಿತರ ಅಂಗಡಿಗಳಲ್ಲಿ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಸಾಧನಗಳನ್ನು ಅಳವಡಿಸಬೇಕೆಂಬ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 
ಪಿಒಎಸ್ ಸಾಧನಗಳನ್ನು ಅಳವಡಿಸಿಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಏ.13 ರಂದು ಆದೇಶ ಹೊರಡಿಸಿತ್ತು. ಆದರೆ ಸರಿಯಾದ ವಿದ್ಯುತ್ ಪೂರೈಕೆ ಇಲ್ಲದೆ ಇದ್ದ ಕಾರಣ ಪಿಒಎಸ್ ಗಳನ್ನು ಬಳಕೆ ಮಾಡಲಾಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ಚಿಕ್ಕಮಗಳೂರಿನ ಲಕ್ಷ್ಮಿ ಹಾಗೂ 35 ಜನರು ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾ.ವಿ ವೀರಪ್ಪ, ಇಲಾಖೆಯ ಆದೇಶಕ್ಕೆ ತಡೆ ನೀಡಿದ್ದು, ಅನಿರ್ಬಂಧಿತ ವಿದ್ಯುತ್ ಪೂರೈಕೆ ಹಾಗೂ ಇಂಟರ್ ನೆಟ್ ಸಂಪರ್ಕ ನೀಡಲು ಎಷ್ಟು ಸಮಯ ಬೇಕು ಎಂದು ಪ್ರಶ್ನಿಸಿದ್ದಾರೆ. 
ಪಿಒಎಸ್ ಸಾಧನಗಳ ಅಳವಡಿಕೆಯನ್ನು ಕಡ್ಡಾಯಗೊಳಿಸುವ ಮುನ್ನ ಆಹಾರ ಇಲಾಖೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತು. ವಿದ್ಯುತ್ ಪೂರೈಕೆ ವ್ಯತ್ಯಯ, ಇಂಟರ್ ನೆಟ್ ಸಮಸ್ಯೆಗಳಿಂದಾಗಿ ಪಿಒಎಸ್ ಗಳನ್ನು ಬಳಕೆ ಮಾಡಲಾಗುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲ ಎಂಆರ್ ರಾಜಗೋಪಾಲ್ ವಾದ ಮಂಡಿಸಿದ್ದಾರೆ. 
ಅರ್ಜಿದಾರರ ಪರ ವಕೀಲರ ವಾದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರಿ ವಕೀಲರು ಪಿಒಎಸ್ ಸಾಧನ ಅಳವಡಿಕೆ ನಗರ ಪ್ರದೇಶಗಳಿಗಷ್ಟೇ ಕಡ್ಡಾಯವಾಗಿದ್ದು ಗ್ರಾಮೀಣ ಭಾಗಗಳಿಗೆ ಕಡ್ಡಾಯ ಮಾಡಲಾಗಿಲ್ಲ ಎಂದು ಕೋರ್ಟ್ ಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT