ರಾಮೇಶ್ವರಂ: ಕಚತಿವುನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರು ಜಲಗಡಿ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ತಮಿಳುನಾಡಿನ 6 ಮೀನುಗಾರರನ್ನು ಬುಧವಾರ ಬಂಧನಕ್ಕೊಳಪಡಿಸಿದೆ.
ಬಂಧಿತೆರೆಲ್ಲರೂ ತಮಿಳುನಾಡು ಮೂಲದವರಾಗಿದ್ದು, ಶ್ರೀಲಂಕಾಕ್ಕೆ ಸೇರಿದ ಡೆಲ್ಫ್ಟ್ ಬಳಿ ಮೀನುಗಾರಿಕೆ ನಡೆಸುತ್ತಿದ್ದು. ಈ ವೇಳೆ ಶ್ರೀಲಂಕಾ ನೌಕಾಪಡೆ ಮೀನುಗಾರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಬಂಧಿತ ತಮಿಳುನಾಡು ಮೀನುಗಾರರರನ್ನು ಕಂಕೆಸಂದುರೈ ನೌಕಾ ನೆಲೆ ಬಳಿ ಕರೆದೊಯ್ಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.