ಉತ್ತರಕಾಶಿ ದುರಂತ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಸಿದ ಪ್ರಧಾನಿ ಮೋದಿ
ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ರು.2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ...
ನವದೆಹಲಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ರು.2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಘೋಷಣೆ ಮಾಡಿದ್ದಾರೆ.
ಅಪಘಾತ ಪ್ರಕರಣ ಕುರಿತಂತೆ ಪ್ರಧಾನಮಂತ್ರಿಗಳ ಕಚೇರಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ ರೂ.2 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ರೂ.50 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಉತ್ತರಕಾಶಿಯಲ್ಲಿ ನಡೆದ ಅಪಘಾತ ನಿಜಕ್ಕೂ ದುರಾದೃಷ್ಟಕರ. ದುರ್ಘಟನೆಯಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ನೋವು ಸಹಿಸಿಕೊಳ್ಳುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲಿಯೇ ಗುಣಮುಖರಾಗಲಿ ಎಂದು ಹೇಳಿದ್ದಾರೆ.
ಚಾರ್'ಧಾಮ್ ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಮಧ್ಯಪ್ರದೇಶದ ನಲುಪಾನಿ ಸಮೀಪ ಭಾಗೀರಥಿ ನದಿಗೆ ಉರುಳಿ ಬಿದ್ದಿತ್ತು. ಪರಿಣಾಮ 21 ಯಾತ್ರಾರ್ಥಿಗಳು ಮೃತಪಟ್ಟಿದ್ದರು.