ಘಟನೆಯಲ್ಲಿ ಹಾನಿಗೊಳಗಾದ ವಾಹನ 
ದೇಶ

ಗಲಭೆಯಿಂದ ಉದ್ವಿಗ್ನಗೊಂಡಿದ್ದ ಸಹರಾನಪುರದಲ್ಲಿ ಪರಿಸ್ಥಿತಿ ಶಾಂತ: ಅಧಿಕಾರಿಗಳು

ದಲಿತ ಮತ್ತು ರಜಪೂತ್ ಸಮುದಾಯದ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ ಉತ್ತರ ಪ್ರದೇಶದ ಸಹರನಾಪುರದಲ್ಲಿ ಪರಿಸ್ಥಿತಿ ಉದ್ನಿಗ್ನಗೊಂಡಿದೆ, ...

ಲಕ್ನೋ: ದಲಿತ ಮತ್ತು ರಜಪೂತ್ ಸಮುದಾಯದ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ  ಉತ್ತರ ಪ್ರದೇಶದ ಸಹರನಾಪುರದಲ್ಲಿ ಪರಿಸ್ಥಿತಿ ಉದ್ನಿಗ್ನಗೊಂಡಿದೆ, ಆದರೆ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಸಿಎಂ ಯೋಗಿ ಆದಿತ್ಯ ನಾಥ್ ಗೃಹ ಇಲಾಖೆ ಕಾರ್ಯದರ್ಶಿ ಮಣಿ ಪ್ರಸಾದ್ ಮಿಶ್ರಾ ನೇತೃತ್ವದ ತಂಡವನ್ನು ಸ್ಥಳಕ್ಕೆ ಕಳುಹಿಸಿದ್ದರು. ಸ್ಥಳಕ್ಕೆ ಭೇಟಿನೀಡಿರುವ ಮಣಿ ಪ್ರಸಾದ್ ಮಿಶ್ರಾ ಅಗತ್ಯ ಭದ್ರತೆ ನಿಯೋಜಿಸಿರುವುದಾಗಿ ಹೇಳಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರತಿಯೊಂದು ತೀರಾ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ, ಸಹಜ ಸ್ಥಿತಿಗೆ ಮರಳುವವರೆಗೂ ಅಲ್ಲಿಯೇ ಬಿಡು ಬಿಟ್ಟಿರುವುದಾಗಿ ಮಿಶ್ರಾ ತಿಳಿಸಿದ್ದಾರೆ.
ಗೃಹ ಕಾರ್ಯದರ್ಶಿ ಸೇರಿದಂತೆ ನಾಲ್ಕು ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡ ಮಂಗಳವಾರ ರಾತ್ರಿ ವಿಶೇಷ ವಿಮಾನದಲ್ಲಿ  ಗಲಭೆ ಪೀಡಿತ ಪ್ರದೇಶಕ್ಕೆ ಆಗಮಿಸಿದೆ. ಎರಡು ಸಮುದಾಯಗಳ ಘರ್ಷಣೆ ನಂತರ ಅಂದರೆ ಏಪ್ರಿಲ್ 20 ರಿಂದ ಆಗಾಗ್ಗೆ ಹಿಂಸಾಚಾರಗಳು ಸಂಭವಿಸುತ್ತಿವೆ. 1 ತಿಂಗಳ ಸಮಯದಲ್ಲಿ ಮೂರು ಬಾರಿ ಘರ್ಷಣೆಗಳು ಸಂಭವಿಸಿವೆ. 
ಮಂಗಳವಾರ ನಡೆದ ಹಿಂಸಾಚಾರಕ್ಕೆ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿಯ ಭೇಟಿಯೇ ಕಾರಣವೆಂದು ಉತ್ತರಪ್ರದೇಶ ಸರ್ಕಾರ ಆರೋಪಿಸಿದೆ. ಇದೇ ತಿಂಗಳಲ್ಲಿ ಶಬ್ಬಿರ್‍ಪುರದಲ್ಲಿ ದಲಿತರು ಹಾಕೂ ಠಾಕೂರ್‍ಗಳ ಮಧ್ಯೆ ಘರ್ಷಣೆಯಾಗಿ ದಲಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಮಾಯಾವತಿ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: 'KPSC' ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜು.19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ನಿಗೂಢ ಮಾಸ್ಕ್ ಮ್ಯಾನ್! ಕೊನೆಗೂ ಗುರುತು ಬಹಿರಂಗ

2028 ವಿಧಾನಸಭಾ ಚುನಾವಣೆ: BJP ಬಣ ಬಡಿದಾಟದ ಲಾಭ JDSಗೆ?; NDA ಸಿಎಂ ರೇಸ್‌ನಲ್ಲಿ ಕುಮಾರಸ್ವಾಮಿ ಹೆಸರು ಮುನ್ನೆಲೆಗೆ..!