ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್: ಮಹಿಳೆ ಅಪಹರಿಸಿ ಅತ್ಯಾಚಾರ, ಗಂಭೀರ ಹಲ್ಲೆ ನಡೆಸಿದ ದುಷ್ಕರ್ಮಿಗಳು

35 ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಲ್ಲದೆ ದುಷ್ಕರ್ಮಿಗಳು ಆಕೆಯ ಮೇಲೆ ಗಂಭೀರವಾಗಿ....

ಹೈದರಾಬಾದ್: 35 ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಲ್ಲದೆ ದುಷ್ಕರ್ಮಿಗಳು ಆಕೆಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೆದಿಪಾಳ್ಯ ಪೊಲೀಸರ ಪ್ರಕಾರ, ಕಳೆದ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ದಿನಗೂಲಿ ಕಾರ್ಮಿಕರಾಗಿರುವ ಬೋದುಪಾಳ್ಯದ ಮಹಿಳೆ ಸೋಮವಾರ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ನಲ್ಲ ಚೆರುವ ಪ್ರದೇಶದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಓರ್ವ ವ್ಯಕ್ತಿ ಮೇಲೆ ಮೇಲೆ ಅತ್ಯಾಚಾರ ಎಸಗಿದ್ದು, ಇತರರು ಕಾಮುಕನ ಕೃತ್ಯಕ್ಕೆ ರಕ್ಷಣೆ ನೀಡಿದ್ದಾರೆ.
ಅತ್ಯಾಚಾರ ಎಸಗಿದ ಬಳಿಕ ದುಷ್ಕರ್ಮಿಗಳು ಮಹಿಳೆ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ, ಆಕೆಯ ಬಳಿ ಇದ್ದ ಚಿನ್ನದ ಸರ ಹಾಗೂ 1,200 ರುಪಾಯಿ ಕಸಿದುಕೊಂಡು ಕಳುಹಿಸಿದ್ದಾರೆ. ಮಹಿಳೆ ಕಷ್ಟಪಟ್ಟು ನಿರ್ಜನ ಪ್ರದೇಶದಿಂದ ಮುಖ್ಯ ರಸ್ತೆ ಬಂದಿದ್ದು, ಆಕೆಯ ಸ್ಥಿತಿ ಗಮನಿಸಿದ ಹಿರಿಯ ದಂಪತಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೆದಿಪಾಳ್ಯ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT