ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ದೇಶ

ಬಿಜೆಪಿ ಸೇರಲು ರಜನಿಕಾಂತ್ ನಿರ್ಧರಿಸಿದ್ದೇ ಆದರೆ, ಸ್ವಾಗತಿಸುತ್ತೇವೆ: ಅಮಿತ್ ಶಾ

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲು ನಿರ್ಧರಿಸಿದ್ದೇ ಆದರೆ, ಅವರಿಗೆ ಬಿಜೆಪಿಯ ಬಾಗಿಲು ಸದಾ ತೆರೆದಿರುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ...

ನವದೆಹಲಿ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲು ನಿರ್ಧರಿಸಿದ್ದೇ ಆದರೆ, ಅವರಿಗೆ ಬಿಜೆಪಿಯ ಬಾಗಿಲು ಸದಾ ತೆರೆದಿರುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.
ರಜನಿಕಾಂತ್ ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡುವ ಕುರಿತಂತೆ ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿರುವ ಹಿನ್ನಲೆಯಲ್ಲಿ ಖಾಸಗಿ ಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಅಮಿತ್ ಶಾ ಅವರು, ರಜನಿಕಾಂತ್ ಅವರಂತಹ ಎಲ್ಲಾ ಸಜ್ಜನರಿಗೆ ಬಿಜೆಪಿಯ ಬಾಗಿಲು ಸದಾ ತೆರೆದಿರುತ್ತದೆ ಎಂದು ಹೇಳಿದ್ದಾರೆ. 
ಇದೇ ವೇಳೆ ಬಿಜೆಪಿ ಸೇರ್ಪಡೆ ಕುರಿತಂತೆ ರಜನಿಕಾಂತ್ ಅವರೊಂದಿಗೆ ಅಮಿತ್ ಶಾ ಮಾತುಕತೆ ನಡೆಸಿದ್ದಾರೆಂಬ ವದಂತಿಗಳನ್ನು ತಳ್ಳಿಹಾಕಿದ್ದಾರೆ. 
ಬಿಜೆಪಿ ಸೇರ್ಪಡೆ ಕುರಿತಂತೆ ರಜನಿಕಾಂತ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆಂಬ ವದಂತಿಗಳು ಕೇಳಿ ಬಂದಿತ್ತು. ಇದಕ್ಕೆ ಭಾನುವಾರವಷ್ಟೇ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ರಜನಿಕಾಂತ್ ಅವರು ಮೋದಿಯವರನ್ನು ಭೇಟಿಯಾಗುವ ಯಾವುದೇ ಸಂಭವಗಳಿಲ್ಲ ಎಂದು ಹೇಳಿದ್ದರು. 
ಕೆಲ ದಿನಗಳ ಹಿಂದಷ್ಟೇ ತಮ್ಮ ಅಭಿಮಾನಿಗಳನ್ನುದ್ದೇಶಿ ಮಾತನಾಡಿದ್ದ ರಜನಿಕಾಂತ್ ಅವರು, ದೇವರು ಬಯಸಿದರೆ ನಾನು ರಾಜಕೀಯ ಸೇರುತ್ತೇನೆಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ