ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಿಆರ್ ಪಿಎಫ್ ವಾಹನದ ಮೇಲೆ ದಾಳಿ: ಬಿಹಾರದ ಐವರು ನಕ್ಸಲರಿಗೆ ಗಲ್ಲು ಶಿಕ್ಷೆ

2014ರ ಲೋಕಸಭೆ ಚುನಾವಣೆ ವೇಳೆ ಬಿಹಾರದಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರನ್ನು ಹತ್ಯೆ ಮಾಡಿದ್ದ ಐವರು ನಕ್ಸಲರಿಗೆ...

ಸಾಂದರ್ಭಿಕ ಚಿತ್ರ
Lingaraj Badiger
Updated On : 25 May 2017, 3:24 am
ಮುಂಗೇರ್: 2014ರ ಲೋಕಸಭೆ ಚುನಾವಣೆ ವೇಳೆ ಬಿಹಾರದಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರನ್ನು ಹತ್ಯೆ ಮಾಡಿದ್ದ ಐವರು ನಕ್ಸಲರಿಗೆ ಮುಂಗೇರ್ ಕೋರ್ಟ್ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.
ಪ್ರಕರಣ ವಿಚಾರಣೆ ನಡೆಸಿದ ಹೆಚ್ಚುವರಿ ಸೇಷನ್ಸ್ ನ್ಯಾಯಾಧೀಶೆ ಜ್ಯೋತಿ ಸ್ವರೂಪ್ ಶ್ರೀವಾತ್ಸವ್ ಅವರು, ಐವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ತಲಾ 25 ಸಾವಿರ ರುಪಾಯಿ ದಂಡ ವಿಧಿಸಿದ್ದಾರೆ.
ಮಾವೋವಾದಿಗಳಾದ ವಿಪಿನ್ ಮಂಡಲ್, ಅಧಿಕ್ ಲಾಲ್ ಪಂಡಿತ್, ರಾಟು ಕೋಡ, ವಾನೋ ಕೋಡ ಹಾಗೂ ಮನು ಕೋಡಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ.

Advertisement

Advertisement

ಏಪ್ರಿಲ್ 2014ರಲ್ಲಿ ಸಿಆರ್ ಪಿಎಫ್ ಯೋಧರು ತೆರಳುತ್ತಿದ್ದ ವಾಹನದ ಮೇಲೆ 50 ನಕ್ಸಲರು ದಾಳಿ ನಡೆಸಿದ್ದರು. ದಾಳಿಯಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಮೃತಪಟ್ಟಿದ್ದರು ಮತ್ತು 10ಕ್ಕೂ ಹೆಚ್ಚು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.
ಸೋಮ್ ಗೌಡ ಹಾಗೂ ರವೀಂದ್ರ ರೈ ಹುತಾತ್ಮ ಯೋಧರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments