ದೇಶ

ಸಹರನ್'ಪುರ ಹಿಂಸಾಚಾರ: ರಾಹುಲ್ ಗಾಂಧಿ ಭೇಟಿಗೆ ಪೊಲೀಸರ ನಿರಾಕರಣೆ

Manjula VN
ನವದೆಹಲಿ: ಹಿಂಸಾಚಾರ ಪೀಡಿತ ಸಹರನ್ ಪುರಕ್ಕೆ ಭೇಟಿ ನೀಡಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ನಿರ್ಧರಿಸಿರುವ ಹಿನ್ನಲೆಯಲ್ಲಿ ಭೇಟಿಗೆ ಅನುಮತಿ ನೀಡಲು ಉತ್ತರಪ್ರದೇಶ ಪೊಲೀಸರು ಶುಕ್ರವಾರ ನಿರಾಕರಿಸಿದ್ದಾರೆ. 
ಉತ್ತರಪ್ರದೇಶದ ಸಹರನಾಪುರದಲ್ಲಿ ದಲಿತ ಮತ್ತು ರಜಪೂತ ಸಮುದಾಯಗಳ ನಡುವೆ ಕೆಲ ದಿನಗಳ ಹಿಂದಷ್ಟೇ ಘರ್ಷಣೆ ನಡೆದಿತ್ತು. ಘರ್ಷಣೆಯಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ಪ್ರಕರಣ ಸಂಬಂಧ ತೀವ್ರ ಅಸಮಾಧಾನ ಹಾಗೂ ಸಂತಾಪ ಸೂಚಿಸಿದ್ದ ಉತ್ತರಪ್ರದೇಶ ಸರ್ಕಾರ ಮೃತನ ಕುಟುಂಬಸ್ಥರಿಗೆ ರೂ.15 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. 
ಹಿಂಸಾಚಾರ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯವರು ಇಂದು ಸಹರನ್'ಪುರಕ್ಕೆ ಭೇಟಿ ನೀಡಲಿದ್ದು, ಪರಿಸ್ಥಿತಿ ಅವಲೋಕಿಸಲಿದ್ದಾರೆಂದು ಹೇಳಲಾಗುತ್ತಿತ್ತು. 
ಸಹರನ್'ಪುರದಲ್ಲಿ ಈಗಾಗಲೇ ಪರಿಸ್ಥಿತಿ ಹದಗೆಟ್ಟಿದ್ದು, ರಾಜಕೀಯ ನಾಯಕರು ಭೇಟಿ ನೀಡುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ ಎಂಬ ಕಾರಣಕ್ಕೆ ರಾಹುಲ್ ಗಾಂಧಿ ಭೇಟಿಗೆ ಉತ್ತರಪ್ರದೇಶ ಪೊಲೀಸರು ನಿರಾಕರಿಸಿದ್ದಾರೆ. ಈಗಾಗಲೇ ಹೆಚ್ಚುವರಿ ಪೊಲೀಸ್ ನಿರ್ದೇಶಕ ಆದಿತ್ಯಾ ಮಿಶ್ರಾ ಸಹರನ್'ಪುರಕ್ಕೆ ಭೇಟಿ ನೀಡಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. 
SCROLL FOR NEXT