ಸಾಂದರ್ಭಿಕ ಚಿತ್ರ 
ದೇಶ

ಉ.ಪ್ರದೇಶ; ಮಹಿಳೆಯರ ಮೇಲೆ ಗ್ಯಾಂಗ್ ರೇಪ್, ದರೋಡೆ ಪ್ರಕರಣ: ನಾಲ್ವರ ಬಂಧನ

ಉತ್ತರ ಪ್ರದೇಶದ ಜೆವಾರ್ ಬಳಿ ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಕಾರಿನಲ್ಲಿ ಬರುತ್ತಿದ್ದ ಕುಟುಂಬವೊಂದನ್ನು ತಡೆದು....

ಗ್ರೇಟರ್ ನೊಯ್ಡಾ: ಉತ್ತರ ಪ್ರದೇಶದ ಜೆವಾರ್ ಬಳಿ ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಕಾರಿನಲ್ಲಿ ಬರುತ್ತಿದ್ದ ಕುಟುಂಬವೊಂದನ್ನು ತಡೆದು ನಿಲ್ಲಿಸಿ, ಕಾರಿನಲ್ಲಿದ್ದ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದು, ಆತನ ಕುಟುಂಬದ ನಾಲ್ವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ ಪ್ರಕರಣದಲ್ಲಿ ಬಂಧಿತ ಶಂಕಿತ ಆರೋಪಿಗಳ ಪಾತ್ರ ಖಚಿತವಾದ ನಂತರ ಆರೋಪಿಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಸಿಂಗ್ ಅವರು ತಿಳಿಸಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ ಇನ್ನು ಹಲವರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ಬಂಧಿತ ಎಲ್ಲಾ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಮತ್ತು ವೈದ್ಯಕೀಯ ವರದಿ ಸಹ ಬಂದಿದೆ. ಆದರೆ ಈಗಲೇ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ದಿಲೀಪ್ ಸಿಂಗ್ ತಿಳಿಸಿದ್ದಾರೆ.
ಅತ್ಯಾಚಾರ ಸಂತ್ರಸ್ಥ ಮಹಿಳೆಯರ ಹೇಳಿಕೆ ದಾಖಲಿಸಿಕೊಳ್ಳುವುದಕ್ಕಾಗಿ ಇಂದು ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ನಿನ್ನೆ ಗ್ರೇಟರ್ ನೋಯ್ಡಾದಲ್ಲಿರುವ ಜೆವಾರ್ ಎಂಬಲ್ಲಿಂದ ಬುಲಂದ್‍ಶಹರ್‍‍ಗೆ ಕುಟುಂಬವೊಂದು ಕಾರಿನಲ್ಲಿ ಪ್ರಯಾಣ ಬೆಳೆಸಿತ್ತು. ಆ ಕಾರಿನಲ್ಲಿ ನಾಲ್ವರು ಗಂಡಸರು ಮತ್ತು ನಾಲ್ವರು ಹೆಂಗಸರಿದ್ದರು. ರಾತ್ರಿ 1 ಗಂಟೆಯ ವೇಳೆಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಪ್ರಯಾಣಿಸುತ್ತಿದ್ದಾಗ ಯಾವುದೋ ವಸ್ತು ಕಾರಿಗೆ ಅಡ್ಡಬಂದಾಗ ಕಾರನ್ನು ನಿಲ್ಲಿಸಿ ಕಾರಿನಲ್ಲಿದ್ದ ಗಂಡಸರು ಹೊರಗಿಳಿದಿದ್ದಾರೆ.
ಆ ಹೊತ್ತಲ್ಲಿ ಆಯುಧಗಳೊಂದಿಗೆ ಬಂದ ಆರು ಮಂದಿ ದುಷ್ಕರ್ಮಿಗಳು ಕಾರನ್ನು ಸುತ್ತುವರಿದು ಕಾರಿನೊಳಗಿದ್ದ ನಾಲ್ವರು ಮಹಿಳೆಯರನ್ನು ಹೊರಗೆಳೆದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತರ ಆ ಕುಟುಂಬದವರ ಕೈಯಲ್ಲಿದ್ದ ವಸ್ತುಗಳನ್ನು ದೋಚಿದ್ದಾರೆ. ಮಹಿಳೆಯರನ್ನು ರಕ್ಷಿಸಲು ಹೋದ 45ರ ಹರೆಯದ ವ್ಯಕ್ತಿಯನ್ನು ಈ  ದುಷ್ಕರ್ಮಿಗಳ ಗುಂಪು ಗುಂಡಿಕ್ಕಿ ಹತ್ಯೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!