ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದ ಕಾರು-8 ಜನರ ದುರ್ಮರಣ
ಮಹಾರಾಷ್ಟ್ರ ರಾಜ್ಯದ ಅಹ್ಮೆದ್'ನಗರ-ಮನ್ಮದ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ...
ಅಹ್ಮೆದ್'ನಗರ: ಮಹಾರಾಷ್ಟ್ರ ರಾಜ್ಯದ ಅಹ್ಮೆದ್'ನಗರ-ಮನ್ಮದ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ವೇಗವಾಗಿ ಬಂದಿರುವ ಸ್ಕಾರ್ಪಿಯೋ ಕಾರು ರಭಸದಿಂದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ 6 ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗದ ಮಧ್ಯೆಯೇ ಮತ್ತಿಬ್ಬರೂ ಕೂಡ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.