ಶ್ರೀನಗರ: ಸುಧೀರ್ಘ ಹಿಂಸಾಚಾರ ಹಾಗೂ ಘರ್ಷಣೆಗಳಿಂದಾಗಿ 22 ಸಾಮಾಜಿಕ ಜಾಲತಾಣಗಳ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಜಮ್ಮು ಮತ್ತು ಕಾಶ್ಮೀರದ ಗೃಹ ಇಲಾಖೆ ಶನಿವಾರ ತೆರವುಗೊಳಿಸಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಕಳೆದ ರಾತ್ರಿ 8.30 ಗಂಟೆ ಬಳಿಕ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾಶ್ಮೀರದ ಬೀದಿಗಳಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೆಲ ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಗೃಹ ಇಲಾಖೆ ಫೇಸ್ ಬುಕ್, ವಾಟ್ಸ್ ಅಪ್ ಮತ್ತು ಟ್ವಿಟ್ಟರ್ ಸೇರಿದಂತೆ ಒಟ್ಟು 22 ಸಾಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧ ಹೇರಿತ್ತು.