ಸಂಗ್ರಹ ಚಿತ್ರ 
ದೇಶ

ದೆಹಲಿ ಹೊಟೆಲ್ ನಲ್ಲಿ ಅನಿವಾಸಿ ಭಾರತೀಯ ಯುವತಿ ಮೇಲೆ ಅತ್ಯಾಚಾರ!

ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಖಾಸಗಿ ಹೊಟೆಲ್ ನಲ್ಲಿ ತಂಗಿದ್ದ ಅನಿವಾಸಿ ಭಾರತೀಯ ಯುವತಿಯೊಬ್ಬರನ್ನು ಯುವಕನೋರ್ವ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ದಾಖಲಿಸಲಾಗಿದೆ.

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಖಾಸಗಿ ಹೊಟೆಲ್ ನಲ್ಲಿ ತಂಗಿದ್ದ ಅನಿವಾಸಿ ಭಾರತೀಯ ಯುವತಿಯೊಬ್ಬರನ್ನು ಯುವಕನೋರ್ವ ಅತ್ಯಾಚಾರ ಮಾಡಿದ್ದಾನೆ ಎಂದು  ದೂರು ದಾಖಲಿಸಲಾಗಿದೆ.

ದೆಹಲಿಯ ನಬಿ ಕರೀಂ ಪ್ರದೇಶದಲ್ಲಿ ಘಟನೆ ನಡೆದಿದ್ದು, 22 ವರ್ಷದ ಅನಿವಾಸಿ ಭಾರತೀಯ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹರ್ಯಾಣ ಮೂಲದ 25 ವರ್ಷದ ಯುವಕನನ್ನು ಬಂಧಿಸಲಾಗಿದೆ.  ಪೊಲೀಸ್ ಮೂಲಗಳು ತಿಳಿಸಿರುವಂತೆ ಯುವತಿಯು ಅಮೆರಿಕದಿಂದ ಭಾರತಕ್ಕೆ ಬಂದ ಬಳಿಕ ಮೂವರು ಯುವಕರೊಂದಿಗೆ ಪರಿಚಯವಾಗಿದ್ದು, ಇವರನ್ನು ಇದೇ ಬುಧವಾರ ಔತಣ ಕೂಟಕ್ಕೆ ಅಹ್ವಾನಿಸಿದ್ದಳು. ಹೀಗೆ ಔತಣಕೂಟಕ್ಕೆ  ಹೋಗಿದ್ದಾಗ ಇತರ ಇಬ್ಬರು ಸ್ನೇಹಿತರು ಶಾಪಿಂಗ್‌ ಗೆ ತೆರಳಿದರು.

ಇದೇ ಸಂದರ್ಭವನ್ನು ತನ್ನ ಕುಕೃತ್ಯಕ್ಕೆ ಬಳಕೆ ಮಾಡಿಕೊಂಡ ಮೂರನೇ ಯುವಕ ಕೊಠಡಿಯಲ್ಲೇ ಯುವತಿ ಮೇಲೆ ಅತ್ಯಾಚಾರ ವೆಸಗಿದ್ದಾನೆ ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಇನ್ನು ಯುವತಿಯ ದಾಖಲೆಗಳನ್ನು  ಪರಿಶೀಲಿಸಿರುವ ಪೊಲೀಸರು ಈಕೆ ಅಧ್ಯಯನದ ವೀಸಾದ ಮೂಲಕ ಭಾರತಕ್ಕೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಹೊಟೆಲ್ ನಲ್ಲಿನ ಸಿಸಿಟಿವಿ ದೃಶ್ಯಾವಳಿ  ಹಾಗೂ ಲಾಗ್‌ ಬುಕ್ ವಶಪಡಿಸಿಕೊಂಡು ಅದರ ಆಧಾರದ ಮೇಲೆ ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಅಂತೆಯೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸಂತ್ರಸ್ತೆ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT