ಸಹರನಾಪುರ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹರಾನಪುರಕ್ಕೆ ಭೇಟಿ ನೀಡುವುದನ್ನು ತಡೆದ ಪೊಲೀಸರು ಈಗ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿಗೆ ನಿರ್ಬಂಧ ಹೇರಿದ್ದಾರೆ.
ಸಹರಾನಪುರಕ್ಕೆ ಭೇಟಿ ನೀಡುವುದನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಯೋಗಿ ಆದಿತ್ಯ ನಾಥ್ ಸರ್ಕಾರವನ್ನು ನಿಂದಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
ಇಂದು ದೇಶದಲ್ಲಿ ಬಲಹೀನರಿಗೆ ಹಾಗೂ ಬಡವರಿಗೆ ಸಮಾಜದಲ್ಲಿ ಬದುಕಲು ಅವಕಾಶವೇ ಇಲ್ಲದಂತಾಗಿದೆ. ಎಲ್ಲರಿಗೂ ರಕ್ಷಣೆ ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ಎನ್ ಡಿಎ ಸರ್ಕಾರ ದೇಶಾದ್ಯಂತ ಬಲಹೀನರದಲ್ಲಿ ಭಯ ಹುಟ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.