ನವದೆಹಲಿ: ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮುನ್ನಎಲ್ಲಾ ವಿರೋಧ ಪಕ್ಷಗಳ ಜೊತೆ ಸಮಾಲೋಚಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ವಿರೋಧ ಪಕ್ಷಗಳ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ಒಮ್ಮತ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ ಎಂದು ಎಂದು ಹೇಳಿದ ಅವರು, ಎಲ್ಲರ ಜೊತೆಯೂ ಚರ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ಜೊತೆಯೂ ಸಮಾಲೋಚಿಸಲಾಗುವುದು ಎಂದು ತಿಳಿಸಿದ್ದಾರೆ. ಇದುವರೆಗೂ ನಾವು ಯಾವುದೇ ಹೆಸರನ್ನು ನಿರ್ಧರಿಸಿಲ್ಲ. ಮೊದಲು ನಮ್ಮ ಎನ್ ಡಿಎ ಮೈತ್ರಿ ಪಕ್ಷಗಳ ಜೊತೆ ಚರ್ಚಿಸುತ್ತೇವೆ. ನಂಕರ ನಾವು ವಿಪಕ್ಷಗಳ ಜೊತೆ ಸಮಾಲೋಚಿಸುತ್ತೇವೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ತಮಿಳುನಾಡಿನ ಎಐಎಡಿಎಂಕೆ ಕೂಡ ತಮ್ಮ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.