ಸಂಗ್ರಹ ಚಿತ್ರ 
ದೇಶ

ಆದಿತ್ಯನಾಥ್ ಆಡಳಿತದಲ್ಲಿ ಮಹಿಳೆಯರು ಮನೆಯೊಳಗೆ ಮಾತ್ರ ಸುರಕ್ಷಿತ: ಅಜಂ ಖಾನ್

ಸಿಎಂ ಯೋಗಿ ಆದಿತ್ಯಾನಾಥ್ ಆಡಳಿತದಲ್ಲಿ ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲ. ಮಹಿಳೆಯರು ತಮ್ಮ ಮನೆಗಳಲ್ಲಿಯೇ ಇರುವುದು ಒಳಿತು ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹೇಳಿದ್ದಾರೆ.

ಲಖನೌ: ಸಿಎಂ ಯೋಗಿ ಆದಿತ್ಯಾನಾಥ್ ಆಡಳಿತದಲ್ಲಿ ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲ. ಹೀಗಾಗಿ ಅವರು ತಮ್ಮ ತಮ್ಮ ಮನೆಗಳಲ್ಲಿಯೇ ಇರುವುದು ಒಳಿತು ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್  ಹೇಳಿದ್ದಾರೆ.

ಇಬ್ಬರು ಮಹಿಳೆಯರಿಗೆ ಹಾಡಹಗಲೇ 14 ಮಂದಿ ಯುವಕರ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್, "ಸಿಎಂ  ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ನಂತರ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತೆ ಆಗಿದೆ. ಹೀಗಾಗಿ ಪುರುಷರು ತಮ್ಮ ಮನೆಯ ಮಹಿಳೆಯರನ್ನು ಮನೆಯೊಳಗೆ ಕೂರಿಸಬೇಕು" ಎಂದು  ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳ ಹಿನ್ನೆಲೆಯಲ್ಲಿ ಮಹಿಳೆಯರು ಅನುಮಾನಾಸ್ಪದ ಮತ್ತು ಸುರಕ್ಷಿತವಲ್ಲದ ನಿರ್ಜನ ಪ್ರದೇಶಗಳಿಗೆ ತೆರಳಬಾರದು. ಇಂತಹ ದುರ್ಬಲ ಸರ್ಕಾರದ ಅಡಿಯಲ್ಲಿ  ಲೂಟಿ ಹಾಗೂ ಕೊಲೆಯಂತಹ ಪ್ರಕರಣಗಳು ನಡೆಯುತ್ತಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಈ ಸರ್ಕಾರದ ಆಡಳಿತದಲ್ಲಿ ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಲೇ ಇದೆ. ಬುಲಂದ್ ಶೆಹರ್ ಘಟನೆಯ ನಂತರ  ಪುರುಷರು ತಮ್ಮ ಮಹಿಳೆಯರನ್ನು ಮನೆಯೊಳಗೆ ಇಡಬೇಕು. ಆದಿತ್ಯನಾಥ್ ಸರ್ಕಾರದ ನಿರ್ಲಕ್ಷ್ಯದಿಂದ ಅಪರಾಧ ಪ್ರಕರಣಗಳು ಏರಿಕೆಯಾಗುತ್ತಿದ್ದು, ಇದಕ್ಕಾಗಿ ನಾನು ಸರ್ಕಾರವನ್ನು ಅಭಿನಂದಿಸುತ್ತೇನೆ” ಎಂದು  ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!