ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ಮೋದಿ ಭೇಟಿ ರಾಜಕೀಯ ಭೇಟಿಯಲ್ಲ, ಸರ್ಕಾರಿ ಭೇಟಿಯಷ್ಟೇ: ಸಿಎಂ ನಿತೀಶ್ ಕುಮಾರ್ ಸ್ಪಷ್ಟನೆ

ನರೇಂದ್ರ ಮೋದಿಯವರೊಂದಿಗಿನ ಭೇಟಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ನಡುವಿನ ಸಾಮಾನ್ಯ ಭೇಟಿಯಾಗಿದ್ದು, ರಾಜಕೀಯ ಭೇಟಿಯಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್...

ನವದೆಹಲಿ: ನರೇಂದ್ರ ಮೋದಿಯವರೊಂದಿಗಿನ ಭೇಟಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ನಡುವಿನ ಸಾಮಾನ್ಯ ಭೇಟಿಯಾಗಿದ್ದು, ರಾಜಕೀಯ ಭೇಟಿಯಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ. 
ನಿನ್ನೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಏರ್ಪಡಿಸಿದ್ದ ಔತಣಕೂಟಕ್ಕೆ ಗೈರು ಹಾಜರಾಗಿದ್ದ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಕಡುವೈರಿಯಾಗಿದ್ದ ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ಮೂಲಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದರು. 
ಭೇಟಿ ಕುರಿತಂತೆ ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿದ್ದವು. ಈ ಹಿನ್ನಲೆಯಲ್ಲಿ ಭೇಟಿ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ಈ ಭೇಟಿಯ ಬಗ್ಗೆ ನೀವು ಏನೇನೋ ಕಲ್ಪಿಸಿಕೊಳ್ಳಬೇಡಿ. ಇದೊಂದು ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ನಡುವಿನ ಸಾಮಾನ್ಯ ಭೇಟಿಯಷ್ಟೇ. ಜೆಡಿಯು ಪಕ್ಷದ ಅಧ್ಯಕ್ಷನಾಗಿ ನಾನು ಮೋದಿಯವರನ್ನು ಭೇಟಿಯಾಗಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ ಭೇಟಿಯಾಗಿದ್ದೇನೆ. ಇದು ರಾಜಕೀಯ ಸಭೆಯಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ