ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಭಾರತದ 2ನೇ ಮಹಾತ್ಮ ಗಾಂಧಿ: ಕೇಂದ್ರ ಸಚಿವ ಗೋಯಲ್!

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ 2ನೇ ಮಹಾತ್ಮಗಾಂಧಿ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯೆಲ್ ಅವರು ಶನಿವಾರ ಹೇಳಿದ್ದಾರೆ...

ರಾಯ್'ಪುರ (ಛತ್ತೀಸ್ಗಢ): ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ 2ನೇ ಮಹಾತ್ಮಗಾಂಧಿ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯೆಲ್ ಅವರು ಶನಿವಾರ ಹೇಳಿದ್ದಾರೆ. 
ಛತ್ತೀಸ್ಗಢದ ರಾಯ್'ಪುರದಲ್ಲಿ ನಿನ್ನೆ ನಡೆದ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಪ್ರಧಾನಿ ಮೋದಿಯವರ ಕಾರ್ಯಕ್ಷಮತೆಗೆ ಮೆಚ್ಚಿರುವ ರಾಷ್ಟ್ರಪತಿ ಮೋದಿ ಅವರನ್ನು ಮಾಜಿ ಪ್ರಧಾನಿಗಳಾದ ನೆಹರೂ ಮತ್ತು ಇಂದಿರಾಗಾಂಧಿ ಜೊತೆಗೆ ಹೋಲಿಕೆ ಮಾಡಿದ್ದಾರೆ. ಆದರೆ, ಮೋದಿಯವರು ಭಾರತದ ಎರಡನೇ ಮಹಾತ್ಮ ಗಾಂಧಿ ಎಂದು ಹೇಳಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ. 
ದೇಶದಲ್ಲಿರುವ ತಾಂಡವಾಡುತ್ತಿದ್ದ ಭ್ರಷ್ಟಾಚಾರ ಮತ್ತು ಯುಪಿಎ ಸರ್ಕಾರ ಹಗರಣಗಳಿಂದ ಬೇಸತ್ತು ಹೋಗಿದ್ದ ಜನತೆ ಗುಜರಾತ್ ನಿಂದ ಮೋದಿಯವರನ್ನು ಕರೆದರು. 
ಮೋದಿ ಸರ್ಕಾರ ಆಡಳಿತ ನಡೆಸುವುದಕ್ಕೂ ಮುನ್ನ ದೇಶದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ಹಗರಣಗಳು ಹಾಗೂ ಇನ್ನಿತರೆ ಸಮಸ್ಯೆಗಳು ತಾಂಡವವಾಡುತ್ತಿತ್ತು. ಪ್ರಧಾನಮಂತ್ರಿಗಳೂ ಕೂಡ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಬೇಸತ್ತಿ ಹೋಗಿದ್ದ ಜನರು ಗುಜರಾತ್ ನಲ್ಲಿರುವ ಸಂತ (ಮೋದಿ)ನನ್ನು ಕರೆದರು. ಮೂರುವ ವರ್ಷದಲ್ಲಿ ಪ್ರಧಾನಿ ಮೋದಿಯವರು ದೇಶವನ್ನು ಉನ್ನತ ಸ್ಥಾನದತ್ತ ಕೊಂಡೊಯ್ದಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಯಾವುದೇ ಪ್ರಧಾನಿಗಳು ಮಾಡದ ಕೆಲಸವನ್ನು ಮೋದಿ ಮಾಡಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?