ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುತ್ತೇವೆ: ರಾಜನಾಥ್ ಸಿಂಗ್

ಕಾಶ್ಮೀರ ಸಮಸ್ಯೆ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಸವಾಲು ಎಂದಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಶಾಶ್ವತ ಪರಿಹಾರ ನೀಡುವ ಭರವಸೆಯನ್ನೂ ನೀಡಿದ್ದಾರೆ.

ರಾಜನಾಥ್ ಸಿಂಗ್
Srinivas Rao BV
Updated On : 28 May 2017, 5:37 am
ನವದೆಹಲಿ: ಕಾಶ್ಮೀರ ಸಮಸ್ಯೆ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಸವಾಲು ಎಂದಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಶಾಶ್ವತ ಪರಿಹಾರ ನೀಡುವ ಭರವಸೆಯನ್ನೂ ನೀಡಿದ್ದಾರೆ. 
ಇಂಡಿಯಾ ಟುಡೆ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ ವೇಳೆ ಕಾಶ್ಮೀರ ಸಮಸ್ಯೆ ಬಗ್ಗೆ ಮಾತನಾಡಿರುವ ರಾಜನಾಥ್ ಸಿಂಗ್, ಕಾಶ್ಮೀರ ಸಮಸ್ಯೆಯನ್ನು ಹಾಗೆಯೇ ಬಿಡಲು ಸಾಧ್ಯವಿಲ್ಲ. ಕಾಶ್ಮೀರ, ಕಾಶ್ಮೀರಿಗಳು ಹಾಗೂ ಕಾಶ್ಮೀರಿಯತ್ ನ್ನು ಗಮನದಲ್ಲಿಟ್ಟುಕೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. 
ಕಾಶ್ಮೀರಕ್ಕೆ ಸಂಬಂಧಪಟ್ಟವರ ಜೊತೆ ಮಾತುಕತೆಗೆ ಕೇಂದ್ರ ಸರ್ಕಾರ ಮುಕ್ತವಾಗಿದೆ ಎಂದಿರುವ ರಾಜನಾಥ್ ಸಿಂಗ್, ಕಾಶ್ಮೀರ ಸಮಸ್ಯೆ ಕೇಂದ್ರ ಸರ್ಕಾರಕ್ಕೆ ಸವಾಲಿನ ಸಂಗತಿಯಾಗಿದೆ. ಆದರೆ ಈ ವಿಷಯದಲ್ಲಿ ಕೇಂದ್ರ ಸರ್ಕಾರ ದ್ವಿಮುಖ ನೀತಿ ಅನುಸರಿಸುವುದಿಲ್ಲ ಎಂದಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವುದಕ್ಕೆ ನಿಗದಿತ ಗಡುವು ಅಥವಾ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಅನುಸರಿಸುವ ಮಾರ್ಗಗಳ ಬಗ್ಗೆ ಮಾಹಿತಿ ನೀಡಲು ರಾಜನಾಥ್ ಸಿಂಗ್ ನಿರಾಕರಿಸಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement