ಅರ್ನಬ್ ಗೋಸ್ವಾಮಿ 
ದೇಶ

ಮಾನಹಾನಿ ಪ್ರಕರಣ: ಅರ್ನಬ್, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ನೋಟಿಸ್

ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅರ್ನಬ್....

ನವದೆಹಲಿ: ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅರ್ನಬ್ ಗೋಸ್ವಾಮಿ ಹಾಗೂ ಇತ್ತೀಚಿಗಷ್ಟೇ ಲಾಂಚ್‌ ಆಗಿದ್ದ ಅವರ ರಿಪಬ್ಲಿಕ್‌ ಟಿವಿಗೆ ನೋಟಿಸ್ ಜಾರಿ ಮಾಡಿರುವ ದೆಹಲಿ ಹೈಕೋರ್ಟ್, ಆಗಸ್ಟ್ 16ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. 
ಶಶಿ ತರೂರ್ ಅವರು ತಮ್ಮ ಪತ್ನಿ ಸುನಂದಾ ಪುಷ್ಕರ್‌ ಸಾವಿನ ಕುರಿತಾದ ಸುದ್ದಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಅರ್ನಬ್ ಗೋಸ್ವಾಮಿ ಹಾಗೂ ಅವರ ರಿಪಬ್ಲಿಕ್ ಟಿವಿ ವಿರುದ್ಧ ಸಿವಿಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನಮೋಹನ್ ಅವರು, ನೀವು ನಿಮ್ಮ ವಾಕ್ಚಾತುರ್ಯವನ್ನು ತೋರಿಸಬಹುದು. ನಿಮ್ಮ ಕಥೆಯನ್ನು ಪ್ರಕಟಿಸಬಹದು. ವಾಸ್ತಾಂಶಗಳನ್ನು ನೀವು ಪ್ರಕಟಿಸಬಹುದು. ಆದರೆ ನೇರವಾಗಿ ಹೆಸರುಗಳನ್ನು ಪ್ರಸ್ತಾಪಿಸುವಂತಿಲ್ಲ ಎಂದು ಹೇಳಿ ಅರ್ನಬ್ ಗೋಸ್ವಾಮಿ ಹಾಗೂ ಅವರ ಟಿವಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಆಗಸ್ಟ್ 16ಕ್ಕೆ ಮುಂದೂಡಿದ್ದಾರೆ.
ಮೇ 8 ರಿಂದ 13ರವರೆಗೆ ರಿಪಬ್ಲಿಕ್‌ ಚಾನೆಲ್‌ನಲ್ಲಿ ಸುನಂದಾ ಪುಷ್ಕರ್‌ ಸಾವಿನ ಕುರಿತಾದ ವರದಿ ಬಿತ್ತರಿಸಲಾಗಿತ್ತು. ಈ ವೇಳೆ ತಮ್ಮ ಘನತೆಗೆ ಧಕ್ಕೆ ಬರುವ ರೀತಿಯಲ್ಲಿ ಟೀಕೆಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ತರೂರ್‌, ಅರ್ನಬ್ ಗೋಸ್ವಾಮಿ, ರಿಪಬ್ಲಿಕ್‌ ನ್ಯೂಸ್‌ ಚಾನೆಲ್‌ ವಿರುದ್ಧ ದೆಹಲಿ ಹೈಕೋರ್ಟ್‌‌ನಲ್ಲಿ ಸಿವಿಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಅಲ್ಲದೇ, ತಮ್ಮ ಘನತೆಗೆ ಧಕ್ಕೆ ತಂದ ಕಾರಣ 2 ಕೋಟಿ ರುಪಾಯಿ ನಷ್ಟ ಪರಿಹಾರ ತುಂಬಬೇಕೆಂದು ಶಶಿ ತರೂರ್‌ ಒತ್ತಾಯಿಸಿದ್ದಾರೆ. 
ಜೊತೆಗೆ ದೆಹಲಿ ಪೊಲೀಸರ ವರದಿ ಬರುವವರೆಗೂ ಸುನಂದಾ ಪುಷ್ಕರ್‌ ಸಾವಿನ ಕುರಿತಾದ ಸುದ್ದಿ ಬಿತ್ತರಿಸುವುದರ ಮೇಲೆ ನಿಗಾ ವಹಿಸಬೇಕೆಂದು ಹೈಕೋರ್ಟ್‌‌ಗೆ ಶಶಿ ತರೂರ್‌ ಮನವಿ ಮಾಡಿದ್ದಾರೆ. 2014ರ ಜನವರಿ 17ರಂದು  ಸುನಂದಾ ಪುಷ್ಕರ್‌  ನಿಗೂಢವಾಗಿ ಸಾವನ್ನಪ್ಪಿದ್ದರು. ಇದು ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ