ಸಂಗ್ರಹ ಚಿತ್ರ 
ದೇಶ

ಹುತಾತ್ಮ ಯೋಧರ ಕುಟುಂಬಕ್ಕೆ ಸೈನಾ, ಅಕ್ಷಯ್ ಕುಮಾರ್ ನೆರವು; ಕರಪತ್ರದಲ್ಲಿ ಮಾವೋವಾದಿಗಳ ಎಚ್ಚರಿಕೆ

ಇತ್ತೀಚೆಗೆ ಮಾವೋವಾದಿಗಳ ಗುಂಡಿಗೆ ಬಲಿಯಾದ 12 ಮಂದಿ ಬಿಎಸ್ ಎಫ್ ಯೋಧರ ಕುಟುಂಬಗಳಿಗೆ ಧನ ಸಹಾಯ ಮಾಡಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರಿಗೆ ಮಾವೋವಾದಿಗಳು ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಯ್‌ಪುರ: ಇತ್ತೀಚೆಗೆ ಮಾವೋವಾದಿಗಳ ಗುಂಡಿಗೆ ಬಲಿಯಾದ 12 ಮಂದಿ ಬಿಎಸ್ ಎಫ್ ಯೋಧರ ಕುಟುಂಬಗಳಿಗೆ ಧನ ಸಹಾಯ ಮಾಡಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್  ಅವರಿಗೆ ಮಾವೋವಾದಿಗಳು ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಅಕ್ಷಯ್ ಕುಮಾರ್ ಮತ್ತು ಸೈನಾ ನೆಹ್ವಾಲ್ ಅವರ ಕ್ರಮವನ್ನು ಮಾವೋವಾದಿಗಳು ಟೀಕಿಸಿದ್ದು,  ಬಡವರ ಲೂಟಿ ಮಾಡುವ ಯೋಧರ ಬದಲು ನಮ್ಮ ಕ್ರಾಂತಿಕಾರಿ ಹೋರಾಟ ಬೆಂಬಲಿಸಿ ಮತ್ತು  ಗೋರಕ್ಷಣೆಯ ಹೆಸರಲ್ಲಿ  ಗೋರಕ್ಷಕರು ದಲಿತರು ಹಾಗೂ ಮುಸ್ಲಿಮರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ನಕ್ಸಲ್ ಪೀಡಿತ ಛತ್ತೀಸ್ ಘಡದ ರಾಯ್ ಪುರ ಮತ್ತು ಬಸ್ತಾರ್ ನಲ್ಲಿ ಕರಪತ್ರ ಹಂಚಲಾಗಿದೆ ಎಂದು  ತಿಳಿದುಬಂದಿದೆ.

ಅಂತೆಯೇ ದಲಿತರ ವಿರುದ್ಧದ ದಾಳಿ ಮಾನಹ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಧ್ವನಿ ಎತ್ತುವಂತೆ ಸಲಹೆ ನೀಡಿದ್ದಾರೆ. ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಸುಮಾರು 300 ಮಂದಜಿ ನಕ್ಸಲರು ಏಕಕಾಲದಲ್ಲಿ ದಾಳಿ  ಮಾಡಿದ್ದರು. ಊಟ ಮಾಡುತ್ತಿದ್ದ ಯೋಧರ ಮೇಲೆ ಏಕಾಏಕಿ ಗುಂಡಿನ ಮಳೆಗರೆದ ಪರಿಣಾಮ ಘಟನೆಯಲ್ಲಿ 12 ಮಂದಿ ಯೋಧರು ಹುತಾತ್ಮರಾಗಿದ್ದರು.

ಈ ಹುತಾತ್ಮ ಯೋಧರ ಕುಟುಂಬಗಳಿಗೆ ನಟ ಅಕ್ಷಯ್ ಕುಮಾರ್ ಹಾಗೂ ಸೈನಾ ನೆಹ್ವಾಲ್ ಅವರು ಆರ್ಥಿಕ ನೆರವು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT