ಎಲ್ ಪಿಜಿ ಸಿಲಿಂಡರ್ ಸ್ಫೋಟ: ಮಹಿಳೆ, ಇಬ್ಬರು ಮಕ್ಕಳ ಸಜೀವ ದಹನ
ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳು ಸಜೀವ ದಹನವಾಗಿರುವ ಘಟನೆ ತ್ರಿಪುರದಲ್ಲಿ...
ಅಗರ್ತಲಾ: ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳು ಸಜೀವ ದಹನವಾಗಿರುವ ಘಟನೆ ತ್ರಿಪುರದಲ್ಲಿ ನಡೆದಿದೆ.
ತ್ರಿಪುರಾದಿಂದ 110 ಕಿಮೀ ದೂರವಿರುವ ಹೃಶ್ಯಮುಕ್ ನಲ್ಲಿ ಭಾನುವಾರ ರಾತ್ರಿ ಈ ದುರಂತ ಸಂಭವಿಸಿದೆ.
ಜುನು ಎಂಬ ಸಣ್ಣ ವ್ಯಾಪಾರಿ ಅಕ್ರಮವಾಗಿ ಪೆಟ್ರೋಲ್ ಸಂಗ್ರಹಿಸಿ ಮನೆಯಲ್ಲಿಟ್ಟ. ಡಬ್ಬಿಗೆ ಪೆಟ್ರೋಲ್ ತುಂಬುವಾಗ ಪಕ್ಕದಲ್ಲೇ ಇದ್ದೆ ಲ್ಯಾಂಪ್ ನ ಬೆಂಕಿಗೆ ಇಂಧನ ಸೋಕಿದೆ ಈ ವೇಳೆ ಹರಡಿದ ಬೆಂಕಿ ಸಿಲಿಂಡರ್ ತಾಕಿ ಸ್ಫೋಟಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಕಿ ಹಂರಡದಂತೆ ತೆಡಯಲು ಜುನು ಪ್ರಯತ್ನಿಸಿದ್ದಾನೆ, ಆದರೆ ದುರಂತದಲ್ಲಿ ಆತನ ಪತ್ನಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.