ಸಂಗ್ರಹ ಚಿತ್ರ 
ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಉಮಾ ಭಾರತಿ ಸೇರಿ ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರು

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ ಕೆ ಅಡ್ವಾಣಿ, ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿ ಪ್ರಕರಣದ ಎಲ್ಲ 12 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಲಖನೌ:  1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಕರಣದ ಎಲ್ಲ ಪ್ರಮುಖ 12  ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಸಂಬಂಧ ಉತ್ತರ ಪ್ರದೇಶದ ಲಖನೌನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಎಸ್ ಕೆ ಯಾದವ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗಿದ್ದು, ಇದೀಗ ಎಲ್ ಕೆ ಅಡ್ವಾಣಿ, ಕೇಂದ್ರ ಸಚಿವೆ  ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಕರಣದ ಎಲ್ಲ ಪ್ರಮುಖ 12 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಈ ಹಿಂದಿನ ವಿಚಾರಣೆಯಲ್ಲಿ ಆರೋಪಿಗಳು ಖುದ್ಧು ಹಾಜರಾತಿಯಾಗದ ಹೊರತು ಅವರ ಯಾವುದೇ ರೀತಿಯ ಮನವಿ ಮತ್ತು ಅರ್ಜಿಗಳನ್ನು ಸ್ಪೀಕರಿಸುವುದಿಲ್ಲ ಎಂದು ನ್ಯಾಯಮೂರ್ತಿ ಎಸ್ ಕೆ ಯಾದವ್ ಸ್ಪಷ್ಟಪಡಿಸಿದ್ದರು. ಈ  ಹಿನ್ನಲೆಯಲ್ಲಿ ಎಲ್ಲ ಆರೋಪಿಗಳು ಇಂದು ವಿಚಾರಣೆಗೆ ಖುದ್ಧು ಹಾಜರಾಗಿ, ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಜಾಮೀನು ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ತಲಾ 50 ಸಾವಿರ ರು.ಗಳ ಬಾಂಡ್ ನೀಡಿ ಜಾಮೀನು ಪಡೆಯುವಂತೆ ಆದೇಶ ನೀಡಿದೆ.

ಆರೋಪ ದಾಖಲು ಮಾಡದಂತೆ ಮುಖಂಡರ ಮನವಿ

ವಿಚಾರಣೆ ವೇಳೆ ತಮ್ಮ ವಿರುದ್ಧದ ಆರೋಪಗಳ ಪಟ್ಟಿಯನ್ನು ದಾಖಲು ಮಾಡಿಕೊಳ್ಳದಂತೆ ಕೋರಿ ಎಲ್ ಕೆ ಅಡ್ವಾಣಿ, ಉಮಾಭಾರತಿ, ಎಂಎಂ ಜೋಷಿ ಸೇರಿದಂತೆ 12 ಮಂದಿ ಆರೋಪಿಗಳು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡರು. ಇದಕ್ಕಾಗಿ ತಮ್ ಪರ ವಕೀಲ ಪ್ರಶಾಂತ್ ಅಟಲ್ ಅವರ ಮೂಲಕವಾಗಿ ಡಿಸ್ಚಾರ್ಜ್ ಅರ್ಜಿಯನ್ನೂ ಕೂಡ ಸಲ್ಲಿಕೆ ಮಾಡಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!