ಬೈಜಯಂತ್ ಪಾಂಡಾ 
ದೇಶ

ಒಡಿಶಾದಲ್ಲಿ ಬಿಜೆಡಿ ಸಂಸದನ ಮೇಲೆ ಮೊಟ್ಟೆ, ಕಲ್ಲು ತೂರಿದ ಕಾರ್ಯಕರ್ತರು

ಒಡಿಶಾದ ಆಡಳಿತರೂಢ ಬಿಜೆಡಿ ಸಂಸದ ಬೈಜಯಂತ್ ಪಾಂಡಾ ಅವರ ಮೇಲೆ ಪಕ್ಷದ ಕಾರ್ಯಕರ್ತರು ಮೊಟ್ಟೆ ಹಾಗೂ ಕಲ್ಲು....

ಭುವನೇಶ್ವರ: ಒಡಿಶಾದ ಆಡಳಿತರೂಢ ಬಿಜೆಡಿ ಸಂಸದ ಬೈಜಯಂತ್ ಪಾಂಡಾ ಅವರ ಮೇಲೆ ಪಕ್ಷದ ಕಾರ್ಯಕರ್ತರು ಮೊಟ್ಟೆ ಹಾಗೂ ಕಲ್ಲು ತೂರಿದ ಘಟನೆ ಅವರ ಸ್ವಕ್ಷೇತ್ರ ಕೇಂದ್ರಪದದಲ್ಲಿ ಮಂಗಳವಾರ ನಡೆದಿದೆ.
ಇಂದು ಜಾತಿಪರಿಲೊ ಗ್ರಾಮದಲ್ಲಿ ಓವರ್ಹೆಡ್ ವಾಟರ್ ಟ್ಯಾಂಕ್ ಯೋಜನೆ ಉದ್ಘಾಟಿಸುತ್ತಿದ್ದ ಸಂದರ್ಭದಲ್ಲಿ ಬಿಜೆಡಿ ಸಂಸದನ ಮೇಲೆ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟರ್ ಮೂಲಕ ಪ್ರತಿಕ್ರಿಯಿಸಿರುವ ಪಾಂಡಾ ಅವರು, ನಾನು ಮೊಟ್ಟೆ ಮತ್ತು ಕಲ್ಲು ತೂರಾಟಕ್ಕೆ ಹೆದರುವುದಿಲ್ಲ. ಕಲ್ಲು ಮತ್ತು ಮೊಟ್ಟೆಯನ್ನು ಬಿಟ್ಟಾಕಿ. ಅವರು ನನ್ನ ಮೇಲೆ ಗುಂಡಿನ ದಾಳಿ ನಡೆಸಿದರು ನಾನು ಜಗ್ಗುವುದಿಲ್ಲ ಎಂದಿದ್ದಾರೆ.
ಇದು ಒಳ್ಳೆಯ ಬೆಳವಣಿಗೆ ಅಲ್ಲ. ನಾನು ಈ ವಿಚಾರವನ್ನು ಪಕ್ಷದ ಮುಖ್ಯಸ್ಥ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಗಮನಕ್ಕೆ ತಂದಿದ್ದೇನೆ. ಅವರಿಗೆ ಸತ್ಯ ತಿಳಿದ ಮೇಲೆ ಅಶಿಸ್ತಿನಿಂದ ವರ್ತಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಭರವಸೆ ಇದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!