ದೇಶ

ಪ್ರತ್ಯೇಕತಾವಾದಿಗಳಿಗೆ ಪಾಕ್ ಆರ್ಥಿಕ ನೆರವು: ಸಾಕ್ಷ್ಯಾಧಾರ ಪತ್ತೆ ಮಾಡಿದ ಎನ್ಐಎ

Manjula VN
ನವದೆಹಲಿ: ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳಿಗೆ ಪಾಕಿಸ್ತಾನ ಆರ್ಥಿಕ ನೆರವು ನೀಡುತ್ತಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಾಳದ ಅಧಿಕಾರಿಗಳಿಗೆ ಬಲವಾದ ಸಾಕ್ಷ್ಯಾಧಾರಗಳು ಲಭ್ಯವಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆದ ಪ್ರಕರಣ ಸಂಬಂಧ ಪ್ರತ್ಯೇಕತಾವಾದಿಗಳಿಗೆ ಸೋಮವಾರವಷ್ಟೇ ಸಮನ್ಸ್ ಜಾರಿ ಮಾಡಲಾಗಿತ್ತು. ಕಾಶ್ಮೀರ ಪ್ರತ್ಯೇಕತಾವಾದಿಗಳಾದ ಫರೂಖ್ ಅಹ್ಮದ್ ದಾರ್, ಜಾವೆದ್ ಅಹ್ಮದ್ ಬಾಬಾ ಮತ್ತು ನಯೀಮ್ ಖಾನ್ ಎಂಬುವವರಿಗೆ ಸಮನ್ಸ್ ಜಾರಿ ಮಾಡಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. 
ಇದರಂತೆ ಪ್ರಕರಣ ಸಂಬಂಧ ಶ್ರೀನಗರದಲ್ಲಿ ತನಿಖೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ ಪ್ರಕರಣ ಸಂಬಂಧ ಬಲವಾದ ಸಾಕ್ಷ್ಯಾಧಾರಗಳು ದೊರಕಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಸಾಕ್ಷ್ಯಾಧಾರಗಳನ್ನು ಆಧರಿಸಿ ಅಧಿಕಾರಿಗಳು ಪ್ರತ್ಯೇಕತಾವಾದಿ ನಾಯಕರನ್ನು ವಿಚಾರಣೆ ನಡೆಸುತ್ತಿದ್ದಾರೆ. 13 ಆರೋಪಿಗಳಿಂದ ಅಧಿಕಾರಿಗಳು ಮಾಹಿತಿಗಳನ್ನು ಸಂಗ್ರಹಿಸಿದ್ದು, ಮಾಹಿತಿಗಳನ್ನು ಚಾರ್ಜ್ ಶೀಟ್ ನಲ್ಲಿ ದಾಖಲಿಸಿದೆ ಎಂದು ಹೇಳಲಾಗುತ್ತಿದೆ. 
ಕೆಲ ದಿನಗಳ ಹಿಂದಷ್ಟೇ ರಾಷ್ಟ್ರೀಯ ಸುದ್ದಿವಾಹಿನಿಯೊಂದು ಕುಟುಕು ಕಾರ್ಯಾಚರಣೆಯನ್ನು ನಡೆಸಿತ್ತು. ಈ ವೇಳೆ ಹುರಿಯತ್ ನಾಯಕರೊಬ್ಬರು ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಹವಾಲಾ ದಂಧೆ ಮೂಲಕ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ನಮಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಹೇಳಿಕೊಂಡಿದ್ದರು. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪ್ರತ್ಯೇಕತಾವಾದಿಗಳಿಗೆ ಸಮನ್ಸ್ ಜಾರಿ ಮಾಡಿದ್ದಾರೆ.
SCROLL FOR NEXT