ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಹುಟ್ಟುಹಬ್ಬ ಸಂಭ್ರಮಕ್ಕೆ ರಾಹುಲ್ ಗಾಂಧಿ ಹಾಜರು
ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ...
ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.
ಜೂನ್ 3ಕ್ಕೆ ಕರುಣಾನಿಧಿ ಅವರು 94ನೇ ವಸಂತಕ್ಕೆ ಕಾಲಿಡಲಿದ್ದಾರೆ. ಜತೆಗೆ ಶಾಸನ ಸಭೆಯ ಸದಸ್ಯರಾಗಿ 60 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚೆನ್ನೈನ ರಾಯ್ ಪೇಟೆಯ ವೈಎಂಸಿಎ ಮೈದಾನದಲ್ಲಿ ಪಕ್ಷ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ಇದಕ್ಕೂ ಮುನ್ನ ಜೂನ್ 1ರಂದು ರಾಹುಲ್ ಗಾಂಧಿ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ತೆಲಂಗಾಣ ಸ್ವತಂತ್ರ ರಾಜ್ಯವಾಗಿ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.