ಸಂಗ್ರಹ ಚಿತ್ರ 
ದೇಶ

ಗಡಿಯಲ್ಲಿ ಉದ್ದಟತನ ಪ್ರದರ್ಶಿಸುತ್ತಿರುವ ಪಾಕ್ 'ಗೆ ದಿಟ್ಟ ಉತ್ತರ: 2 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ಬಳಿ ಉದ್ಧಟತವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ಬಳಿ ಉದ್ಧಟತವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. 
ಈ ಕುರಿತಂತೆ ರಕ್ಷಣಾ ಮೂಲಗಳು ಮಾಹಿತಿ ನೀಡಿದ್ದು, ಕಾಶ್ಮೀರದ ಉರಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಗಡಿ ರಕ್ಷಣಾಪಡೆಯ ದಾಳಿಯನ್ನು ವಿಫಲಗೊಳಿಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಖಚಿತಪಡಿಸಿದೆ. 
ಬಿಎಟಿ (ಪಾಕಿಸ್ತಾನ ಗಡಿ ರಕ್ಷಣಾ ಪಡೆ)ಯ ದಾಳಿಯ ಮಾಹಿತಿ ಸಿಗುತ್ತಿದ್ದಂತೆಯೇ ಸೇನೆ ತನ್ನ ಕಾರ್ಯಾಚರಣೆಯನ್ನು ಚುರುಕುಗೊಳಿಸಿತ್ತು. ಇದರಂತೆ ಗಡಿಯಲ್ಲಿ ದಾಳಿಗೆ ಯೋಜನೆ ರೂಪಿಸುತ್ತಿದ್ದ ಮೂರು ಪಾಕಿಸ್ತಾನ ವಾಹನಗಳ ಮೇಲೆ ದಾಳಿ ನಡೆಸಿ ಇಬ್ಬರನ್ನು ಹತ್ಯೆ ಮಾಡಿದೆ. ಅಲ್ಲದೆ. ದಾಳಿಯಲ್ಲಿ 4 ಜನರಿಗೆ ಗಾಯಗಳಾಗಿವೆ. ದಾಳಇಯಿಂದ ಪಾಕಿಸ್ತಾನಕ್ಕೆ ಭಾರೀ ಹೊಡೆತ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ. 
ಪಾಕಿಸ್ತಾನ ಬಿಎಟಿ (ಪಾಕಿಸ್ತಾನ ಗಡಿ ರಕ್ಷಣಾ ಪಡೆ)ಯ ದಾಳಿ ಸಂಭವ ಕುರಿತಂತೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನಾ ಪಡೆ ಗಡಿಯಲ್ಲಿ ಭಾರೀ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ಶ್ರೀನಗರ-ಮುಜಾಫರಾಬಾದ್ ನ ಬಸ್ ಸೇವೆಗಳು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 
ಪಾಕಿಸ್ತಾನ ನಿಯಂತ್ರಿತ ಕಾಶ್ಮೀರದ ಛಕೋಥಿ-ಮುಜಾಫರಬಾದ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಸಜ್ಜಾಗಿ ನಿಂತಿದ್ದು, ಯಾವುದೇ ಪರಿಸ್ಥಿತಿ ಎದುರಾದರೂ ದಿಟ್ಟ ಉತ್ತರ ನೀಡಲು ಸಿದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!