ಚೆನ್ನೈ: ಚೆನ್ನೈನ ಟಿ.ನಗರದಲ್ಲಿರುವ ಚೆನ್ನೈ ಸಿಲ್ಕ್ ಶೋ ರೂಂನ ಎರಡು ಅಂತಸ್ಥಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮುಂಜಾನೆ 5 ಗಂಟೆ ಸುಮಾರಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿ ನಂದಿಸಲು ಹಲವು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ತೆರಳಿವೆ.
ಅಗ್ನಿ ಅವಘಡ ಸಂದರ್ಭದಲ್ಲಿ ಶೋ ರೂಂನಲ್ಲಿ 11 ಮಂದಿ ಸಿಬ್ಬಂದಿ ಸಿಲುಕಿದ್ದು ಅವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.