ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉಗ್ರ ಸಬ್ಜಾರ್ ಅಹ್ಮದ್ ಭಟ್ ಹತ್ಯೆ: ಸೇನಾ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಶ್ಲಾಘನೆ

ಉಗ್ರ ಸಬ್ಜಾರ್ ಅಹ್ಮದ್ ಭಟ್ ನ್ನು ಹತ್ಯೆ ಮಾಡಿರುವ ಸೇನಾ ಪಡೆಗಳ ಕಾರ್ಯಾಚರಣೆಗೆ ಉತ್ತರ ಕಮಾಂಡ್ ನ ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Srinivas Rao BV
Updated On : 31 May 2017, 4:53 am
ಶ್ರೀನಗರ: ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಸಬ್ಜಾರ್ ಅಹ್ಮದ್ ಭಟ್ ನ್ನು ಹತ್ಯೆ ಮಾಡಿರುವ ಸೇನಾ ಪಡೆಗಳ ಕಾರ್ಯಾಚರಣೆಗೆ ಉತ್ತರ ಕಮಾಂಡ್ ನ ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ದಕ್ಷಿಣ ಕಾಶ್ಮೀರದಲ್ಲಿರುವ ಆರ್ಮಿ ಫಾರ್ಮೇಷನ್ ಗೆ ಭೇಟಿ ನೀಡಿ ಭದ್ರತಾ ಪರಿಶೀಲನೆ ನಡೆಸಿದ ಅವರು, ಅಮರನಾಥ್ ಯಾತ್ರೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಯೂ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿರುವ ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ದು ಉಗ್ರ ಸಬ್ಜಾರ್ ಅಹ್ಮದ್ ಭಟ್ ನ್ನು ಹತ್ಯೆ ಮಾಡಿದ್ದಕ್ಕಾಗಿ ಭಾರತೀಯ ಸೇನೆಯ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. 
ಜೂ.29 ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿರುವ ಸಂದರ್ಭದಲ್ಲೇ ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದ್ದು, ಮತ್ತೆ ಕಣಿವೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆಗಳಿವೆ ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement