ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೊರೆಯಲ್ಲಿ ಭಯೋತ್ಪಾದಕರು ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು ನಾಲ್ವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.
ಬ್ಯಾಂಕ್ ಮುಂಭಾಗದಲ್ಲಿ ಈ ದಾಳಿ ನಡೆದಿದ್ದು, ಗ್ರೆನೇಡ್ ಸ್ಫೋಟಗೊಂಡ ಪರಿಣಾಮ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭದ್ರತಾ ಪಡೆಗಳು ಆಗಮಿಸಿದ್ದು, ದಾಳಿಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.