ಕಾಶ್ಮೀರ: ಭಾರತೀಯ ಸೇನೆಯಿಂದ 12 ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿ ಬಿಡುಗಡೆ
ಕಾಶ್ಮೀರ ಕಣಿವೆಯಲ್ಲಿ ಸಕ್ರಿಯರಾಗಿರುವ 12 ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ.
ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಸಕ್ರಿಯರಾಗಿರುವ 12 ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ.
ಹುಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸಬ್ಜಾರ್ ಅಹ್ಮದ್ ಭಟ್ ಹತ್ಯೆಯ ಬೆನ್ನಲ್ಲೇ ಭಾರತೀಯ ಸೇನೆ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯ ಅಬು ದುಂಜಾನ, ಹಿಜ್ಬುಲ್ ಮುಜಾಹಿದ್ದೀನ್ ನ ರಿಯಾಜ್ ನೈಕೂ ಅಲಿಯಾಸ್ ಜುಬೈರ್ ಹಾಗೂ ಜಾಕಿರ್ ರಶೀದ್ ಎಂಬ ಉಗ್ರರ ಹೆಸರೂ ಇವೆ.
ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖಂಡ ಸಬ್ಜಾರ್ ಅಹ್ಮದ್ ಭಟ್ ಹತ್ಯೆಯ ನಂತರ ರಿಯಾಜ್ ನೈಕೂ ಅಲಿಯಾಸ್ ಜುಬೈರ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಂದಿನ ಕಮಾಂಡರ್ ಎಂದು ಹೇಳಲಾಗುತ್ತಿದೆ.
ಬುರ್ಹಾನ್ ವನಿಯಂತೆ ನೈಕೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದು, ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿ ಇಸ್ಲಾಮ್ ಗಾಗಿ ಜಿಹಾದ್ ನ್ನು ಪ್ರತಿಪಾದಿಸುತ್ತಿದ್ದಾನೆ ಎಂದು ತಿಳಿದುಬಂದಿದೆ.