ಸಾಂದರ್ಭಿಕ ಚಿತ್ರ 
ದೇಶ

ಉತ್ತರಪ್ರದೇಶ: ವಿಷಯುಕ್ತ ಬಿಸ್ಕೆಟ್ ತಿಂದು 100ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

ಸರ್ಕಾರಿ ಸ್ವಾಮ್ಯದ ವಸತಿ ಶಾಲೆಯೊಂದರಲ್ಲಿ ನೀಡಲಾಗಿರುವ ವಿಷಯುಕ್ತ ಬಿಸ್ಕೆಟ್ ತಿಂದು 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಭದೋಹಿ ಜಿಲ್ಲೆಯ ರಯಾ ಪ್ರದೇಶದಲ್ಲಿ ಬುಧವಾರ ನಡೆದಿದೆ...

ಭದೋಹಿ: ಸರ್ಕಾರಿ ಸ್ವಾಮ್ಯದ ವಸತಿ ಶಾಲೆಯೊಂದರಲ್ಲಿ ನೀಡಲಾಗಿರುವ ವಿಷಯುಕ್ತ ಬಿಸ್ಕೆಟ್ ತಿಂದು 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಭದೋಹಿ ಜಿಲ್ಲೆಯ ರಯಾ ಪ್ರದೇಶದಲ್ಲಿ ಬುಧವಾರ ನಡೆದಿದೆ. 
ರಯಾ ಪ್ರದೇಶದಲ್ಲಿರುವ ದೀನ್'ದಯಾಳ್ ವಸತಿ ಶಾಲೆಯಲ್ಲಿ ನಿನ್ನೆ ಸಂಜೆ ಮಕ್ಕಳಿಗೆ ಬಿಸ್ಕೆಟ್ ನೀಡಲಾಗಿದೆ. ಬಿಸ್ಕೆಟ್ ತಿಂದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ಹೊಟ್ಟೆನೋವು ಹಾಗೂ ವಾಂತಿ ಶುರುವಾಗಿದೆ. ಕೂಡಲೇ ಶಾಲಾ ಸಿಬ್ಬಂದಿಗಳು ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 
ವೈದ್ಯಕೀಯ ಅಧಿಕಾರಿ ಸತೀಶ್ ಸಿಂಗ್ ಆವರು ಮಾತನಾಡಿ, ಆಸ್ಪತ್ರೆಗೆ ದಾಖಲಾಗಿರುವ ಎಲ್ಲಾ ಮಕ್ಕಳೂ 10-14 ವರ್ಷದೊಳಗಿನ ಮಕ್ಕಳಾಗಿದ್ದಾರೆ. 100 ಮಕ್ಕಳ ಪೈಕಿ 45 ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಇನ್ನುಳಿದ 55 ಮಕ್ಕಳನ್ನು ಪರೀಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ. 

ಜಿಲ್ಲಾಧಿಕಾರಿ ವಿಶಾಕ್ ಜಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಶಾಲೆಯನ್ನು ನಡೆಸುತ್ತಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ